ಸಿಬಿಐ ಎಫ್‌ಐಆರ್ ವಿವರಗಳು ಲಭ್ಯವಾಗಿಲ್ಲ: ಸಿಎಂ ಸಿದ್ದರಾಮಯ್ಯ
ಶುಕ್ರವಾರ, 27 ಅಕ್ಟೋಬರ್ 2017 (12:44 IST)
ಡಿವೈಎಸ್‌ಪಿ ಎಂ.ಕೆ.ಗಣಪತಿ ಪ್ರಕರಣದ ಬಗ್ಗೆ ಸಿಬಿಐ ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಬಗ್ಗೆ ವಿವರಗಳು ಲಭ್ಯವಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಚಿವ ಜಾರ್ಜ್ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್ ವಿವರಗಳು ಲಭ್ಯವಾದ ನಂತರ ಪ್ರತಿಕ್ರಿಯೆ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಿಬಿಐ ಎಫ್‌ಐಆರ್ ದಾಖಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಜಾರ್ಜ್, ಗಣಪತಿ ಪ್ರಕರಣದಲ್ಲಿ ಸಿಐಡಿ ಕ್ಲೀನ್ ಚಿಟ್ ನೀಡಿದೆ. ಸಿಬಿಐ ಎರಡು ಅಥವಾ ಮೂರು ತಿಂಗಳಲ್ಲಿ ಮಧ್ಯಂತರ ವರದಿ ಸಲ್ಲಿಸಲಿದೆ. ಮಧ್ಯಂತರ ವರದಿ ಸಲ್ಲಿಸಿದ ನಂತರ ಹೇಳಿಕೆ ನೀಡುತ್ತೇನೆ ಎಂದು ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿದ್ದು, ಸಚಿವ ಜಾರ್ಜ್ ಸೇರಿದಂತೆ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಂಕಷ್ಟ ತಂದೊಡ್ಡಿದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.