100 ಕ್ಕೂ ಹೆಚ್ಚು ದೇಶಗಳಲ್ಲಿ ಯೋಗ ದಿನ ಆಚರಣೆ

ಶುಕ್ರವಾರ, 21 ಜೂನ್ 2019 (17:16 IST)
ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕತೆಯ ಭಾರತೀಯ ಯೋಗ ಪದ್ಧತಿಯು ಸುಮಾರು 5000 ವರ್ಷಗಳ ಇತಿಹಾಸ ಹೊಂದಿದೆ. ಯೋಗದ ಮಹತ್ವ ಅರಿತು ವಿಶ್ವದ 100ಕ್ಕೂ ಹೆಚ್ಚಿನ ರಾಷ್ಟ್ರಗಳಲ್ಲಿ ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ.

ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆಯುಷ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಚಂದ್ರಶೇಖರ ಪಾಟೀಲ ಕ್ರಿಡಾಂಗಣದಲ್ಲಿ    ಆಯೋಜಿಸಲಾದ 5ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಎಂದು ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಸಿ.ಪಾಟೀಲ ಮಾತನಾಡಿದ್ರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಒತ್ತಾಯದ ಮೇರೆಗೆ ವಿಶ್ವ ಸಂಸ್ಥೆಯು ಯೋಗಕ್ಕೆ ಅಂತರಾಷ್ಟ್ರೀಯ ಮಾನ್ಯತೆ ನೀಡಿದ ಪರಿಣಾಮ ವಿಶ್ವದಾದ್ಯಂತ ಇಂದು ಯೋಗ ದಿನಾಚರಣೆ ಆಚರಿಸುತ್ತಿರುವುದನ್ನು ನಾವು ಕಾಣುತ್ತಿದ್ದೇವೆ. ಯೋಗ ಕೇವಲ ದಿನಾಚರಣೆಗೆ ಸೀಮಿತವಾಗದೇ ಪ್ರತಿ ದಿನ ಯೋಗ ಮಾಡುವುದರ ಮೂಲಕ ರೋಗದಿಂದ ಮುಕ್ತಿ ಪಡೆಯಿರಿ ಎಂದರು. 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜಾ ಪಿ. ಮಾತನಾಡಿ, ಭಾರತೀಯ ಯೋಗ ಪರಂಪರೆಯನ್ನು ಒಪ್ಪಿಕೊಂಡು ಇಂದು ಇಡೀ ವಿಶ್ವ ಯೋಗ ದಿನಾಚರಣೆ ಸಂಭ್ರಮದಲ್ಲಿ ಭಾಗವಹಿಸಿದ್ದು, ಭಾರತೀಯರಾದ ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ.

ಆಧ್ಯಾತ್ಮಿಕತೆಯಲ್ಲಿ ಭಾರತವು ವಿಶ್ವಕ್ಕೆ ನೀಡಿರುವ ಬಹುದೊಡ್ಡ ಕೊಡುಗೆ “ಯೋಗ.  ಶಾಲಾ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿಯೆ ಯೋಗದ ಬಗ್ಗೆ ಮಹತ್ವ ತಿಳಿಸುವ ಮೂಲಕ ಯೋಗಕ್ಕೆ ಪ್ರೇರೇಪಿಸಬೇಕು ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ