ನೋಂದಣಿ ಮಾಡಿದರೆ ಮಾತ್ರ ಯೋಗ ಮಾಡಲು ಅವಕಾಶ : ಪ್ರತಾಪ್ ಸಿಂಹ
ಸೋಮವಾರ, 13 ಜೂನ್ 2022 (14:57 IST)
ಮೈಸೂರು : ನೋಂದಣಿ ಮಾಡಿಕೊಂಡವರಿಗೆ ಮಾತ್ರ ಯೋಗ ಮಾಡಲು ಅವಕಾಶ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಯೋಗದಿನ 21ಕ್ಕೆ ಮೈಸೂರಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಅದ್ದೂರಿ ವೇದಿಕೆ ಸಿದ್ಧವಾಗಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೋದಿ ಅವರು ಯೋಗ ಮಾಡುವ ವೇದಿಕೆ. ರಾಜಕೀಯ ವೇದಿಕೆಯಲ್ಲ.
ಮೋದಿ ಅವರ ಜೊತೆ ನನ್ನನ್ನು ಸೇರಿದಂತೆ ಸ್ಥಳೀಯ ಯಾವ ಶಾಸಕರಿಗೂ ಮೋದಿ ಅವರ ವೇದಿಕೆಯಲ್ಲಿ ಸ್ಥಾನ ಇರುವುದಿಲ್ಲ ಎಂದು ತಿಳಿಸಿದರು.
ಮೋದಿ ಅವರ ಜೊತೆ ಸಿಎಂ, ರಾಜ್ಯಪಾಲರು, ಕೇಂದ್ರ ಆಯುಷ್ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾತ್ರ ವೇದಿಕೆ ಮೇಲೆ ಅವಕಾಶ ಕಲ್ಪಿಸಲಾಗಿದೆ.
ನಾವೆಲ್ಲಾ ರಾಜಕಾರಣಿಗಳು ವೇದಿಕೆಯ ಕೆಳಭಾಗದ ಒಂದು ಬದಿಯಲ್ಲಿರುತ್ತೇವೆ. ಇದರಲ್ಲಿ ಯಾವ ಬದಲಾವಣೆಗಳು ಇಲ್ಲ. ನನ್ನ ಮತ್ತು ರಾಮದಾಸ್ ನಡುವೆ ಈ ವಿಚಾರದಲ್ಲಿ ಕ್ರೆಡಿಟ್ ವಾರ್ ನಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಮೋದಿ ಅವರ ವೇದಿಕೆ ಮುಂಭಾಗ 7 ಸಾವಿರ ಜನಕ್ಕೆ ಅವಕಾಶ ಇರುತ್ತದೆ. ಒಟ್ಟಾರೆ ಅರಮನೆಯ ಎಲ್ಲ ಭಾಗವೂ ಸೇರಿ 15 ಸಾವಿರ ಜನಕ್ಕೆ ಅವಕಾಶವಾಗಬಹುದು. ಆದರೆ ಎಲ್ಲರಿಗೂ ಮೋದಿ ಅವರು ಕಾಣುವುದಿಲ್ಲ.