ಯೋಗ ಭಾರತೀಯ ಸಂಸ್ಕೃತಿಯಲ್ಲಿ ಅಮೂಲ್ಯವಾದ ಪದ್ಧತಿ- ನಳೀನ್ ಕುಮಾರ್ ಕಟೀಲು
ಭಾನುವಾರ, 21 ಜೂನ್ 2020 (09:42 IST)
ಬೆಂಗಳೂರು : ಇಂದು 6ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನಲೆಯಲ್ಲಿ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಸೇರಿ ಹಲವರು ಯೋಗ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.
ಬಳಿಕ ಈ ಬಗ್ಗೆ ಮಾತನಾಡಿದ ಅವರು, ಯೋಗ ಭಾರತೀಯ ಸಂಸ್ಕೃತಿಯಲ್ಲಿ ಅಮೂಲ್ಯವಾದ ಪದ್ಧತಿ. ಯೋಗ ಆಧ್ಯಾತ್ಮದ ಒಂದು ಭಾಗ. ಭಾರತೀಯ ಸಂಸ್ಕೃತಿ ಕಣ್ಣುಮುಚ್ಚಿ ಭಗವಂತನನ್ನು ಕಂಡಿದೆ. ಯೋಗದ ಮೂಲಕ ಭಗವಂತನ ಧಾನ್ಯ ಮಾಡಲಾಗುತ್ತದೆ. ಮನಸ್ಸು ಬುದ್ಧಿಯ ಮೂಲಕ ಭಗವಂತ, ಮೋಕ್ಷವನ್ನು ಕಾಣುವ ಪದ್ಧತಿ ಯೋಗ ಎಂದು ಬಣ್ಣಿಸಿದ್ದಾರೆ.