ಆಗ್ರಾದ ಸರ್ಕ್ಯೂಟ್ ಹೌಸ್‌ನಲ್ಲಿ ರಾತ್ರಿ ಕಳೆಯುವ ಮೂಲಕ ಸಂಪ್ರದಾಯ ಮುರಿದ ಯೋಗಿ ಆದಿತ್ಯನಾಥ್

ಮಂಗಳವಾರ, 16 ಜನವರಿ 2018 (19:52 IST)
ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಗ್ರಾದ ಸರ್ಕ್ಯೂಟ್ ಹೌಸ್‌ನಲ್ಲಿ ರಾತ್ರಿ ಕಳೆಯುವ ಮೂಲಕ 16 ವರ್ಷಗಳ ಸಂಪ್ರದಾಯವನ್ನು ಮುರಿದುಹಾಕಿದ್ದಾರೆ.
 
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ದಂಪತಿಯನ್ನು ಆಗ್ರಾದಲ್ಲಿ ಬರಮಾಡಿಕೊಳ್ಳುವ ಸಲುವಾಗಿ ಯೋಗಿ ಆದಿತ್ಯನಾಥ್ ಅವರು ಆಗ್ರಾ ಸರ್ಕ್ಯೂಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಿದ್ದರು.
 
ಆಗ್ರಾದ ಸರ್ಕ್ಯೂಟ್‌ ಹೌಸ್‌ನಲ್ಲಿ ರಾತ್ರಿ ಕಳೆಯುವ ಮುಖ್ಯಮಂತ್ರಿ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಭಯದಿಂದ ಕಳೆದ 16 ವರ್ಷದಲ್ಲಿ ಯಾವುದೇ ಮುಖ್ಯಮಂತ್ರಿ ವಾಸ್ತವ್ಯ ಮಾಡಿರಲಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
 
ಈ ಹಿಂದೆ ರಾಜನಾಥ್ ಸಿಂಗ್ ಅವರು ಮುಖ‌್ಯಮಂತ್ರಿ ಆಗಿದ್ದಾಗ ಅವರು ಆಗ್ರಾದ ಸರ್ಕ್ಯೂಟ್ ಹೌಸ್‌ನಲ್ಲಿ ತಂಗಿದ್ದರು. ಅವರು ಮುಖ್ಯಮಂತ್ರಿ ಪದವಿಯಿಂದ ಕೆಳಗಿದ ಬಳಿಕ, ಮುಲಾಯಂ ಸಿಂಗ್, ಮಾಯಾವತಿ ಹಾಗೂ ಅಖಲೇಶ ಯಾದವ್ ಈ ಸಾಹಸಕ್ಕೆ ಕೈ ಹಾಕಿರಲಿಲ್ಲ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ