ಯೋಗಿ ಆದಿತ್ಯನಾಥ್‌ ಜಂಗಲ್ ರಾಜ್ ಸರಿಮಾಡಲಿ– ಸಿದ್ದರಾಮಯ್ಯ

ಭಾನುವಾರ, 7 ಜನವರಿ 2018 (20:41 IST)
ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೊದಲು ಜಗಂಲ್ ರಾಜ್ ಸರಿಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಗಿ ಆದಿತ್ಯನಾಥ್ ಅವರಿಗೆ ಟಾಂಗ್ ನೀಡಿದ್ದಾರೆ.

ಟ್ವಿಟ್ಟರ್‌ನಲ್ಲಿ ಟ್ವಿಟ್ ಮಾಡಿರುವ ಅವರು, ಉತ್ತರ ಪ್ರದೇಶದ ಜಂಗಲ್ ರಾಜ್‌ನ್ನು ಸರಿಮಾಡಿ, ಆಸ್ಪತ್ರೆಯಲ್ಲಿ ಸಾಯುತ್ತಿರುವ ಮಕ್ಕಳನ್ನು ಉಳಿಸಲಿ. ನಂತರ ಬುದ್ದಿ ಹೇಳುವುದು ಮಾಡಲಿ ಎಂದು ಹೇಳಿದ್ದಾರೆ.
 
ಸೋಲಿನ ಭಯದಿಂದ ಬಿಜೆಪಿ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡುತ್ತಿದ್ದು, ನಾಡಿನ ಜನರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಸರಣಿ ಟ್ವೀಟ್ ಗಳ ಮೂಲಕ ಬಿಜೆಪಿ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ