ಸಾಮಾಜಿಕ ಜಾಲತಾಣಗಳಲ್ಲಿ ಅನಧಿಕೃತ ಸಂದೇಶಗಳನ್ನು ಹಾಕಿದ್ರೆ ಅಂಥವರ ವಿರುದ್ಧ ಕೇಸ್ ಹಾಕಿ ಜೈಲಿಗೆ ಕಳಿಸೋಕೆ ಜಿಲ್ಲಾಡಳಿತ ಮುಂದಾಗಿದೆ.
ಕೊರೊನಾ ವೈರಸ್ ಸೋಂಕು ಹೊಂದಿದ ವ್ಯಕ್ತಿಗಳ ಹೆಸರು, ವಿಳಾಸದ ವಿವರಗಳ ಮಾಹಿತಿಯನ್ನು ದಿನಾಂಕ 22-04-2020 ರಂದು ಅನಧಿಕೃತವಾಗಿ ಕೆಲವು ವ್ಯಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ.
ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಿಗೆ ಹಾಕುವುದು, ಮಾಧ್ಯಮಗಳಲ್ಲಿ ಪ್ರಕಟಿಸುವುದು, ಈ ಸಂದೇಶವನ್ನು ಅನಧಿಕೃತವಾಗಿ ಹರಡುವುದು ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ 1897 ಹಾಗೂ ಕೋವಿಡ್ ನಿಯಂತ್ರಣ ಕಾಯ್ದೆ 2020 ರಡಿ ಅಪರಾಧವಾಗಿದೆ.
ಈ ಕುರಿತು ತನಿಖೆ ನಡೆಸಿ ಸೂಕ್ತ ನಿಗಾ ಇರಿಸಿ , ಕಾಯ್ದೆ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಹುಬ್ಬಳ್ಳಿ -ಧಾರವಾಡ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.