ಲೋಕಾಯುಕ್ತವನ್ನು ದುರ್ಬಲಗೊಳಿಸಿ 59 ಪ್ರಕರಣಗಳನ್ನು ಮುಚ್ಚಿ ಹಾಕಿದ ಕಾಂಗ್ರೆಸ್ ಪಕ್ಷಕ್ಕೆ ಪ್ರತಿಭಟಿಸುವ ಯಾವ ನೈತಿಕತೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.. ಚಿತ್ರದುರ್ಗದ SJM ಹೆಲಿಪ್ಯಾಡ್ನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅವರ ಮಂತ್ರಿಗಳ ಕಚೇರಿಯಲ್ಲೇ 2 ಲಕ್ಷ ಹಣ ಸಿಕ್ಕಿತ್ತು. ಸಿದ್ದರಾಮಯ್ಯ ರಾಜೀನಾಮೆ ಕೊಡ್ರಾ? ಅಂದು ಲೋಕಾಯುಕ್ತ ಇದ್ದಿದ್ದರೆ ಅರೆಸ್ಟ್ ಆಗುತ್ತಿದ್ದರು. ಆದರೆ, ಲೋಕಾಯುಕ್ತ ದುರ್ಬಲಗೊಳಿಸಿದ್ದರು ಎಂದರು. ಭ್ರಷ್ಟಾಚಾರದ ವಿರುದ್ಧ ನಮ್ಮ ಸಮರ ಎನ್ನುವುದಕ್ಕೆ ಮಾಡಾಳ್ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿರುವುದೇ ಸಾಕ್ಷಿ ಎಂದು ಸಿಎಂ ಹೇಳಿದರು.ಈ ಆರೋಪದ ಮೂಲಕ ಕಾಂಗ್ರೆಸ್ ತನ್ನ ಪಾಪಗಳನ್ನು ತೊಳೆದುಕೊಳ್ಳಲು ಸಾಧ್ಯ ಇಲ್ಲ. ಕಾನೂನು ತನ್ನ ಕೆಲಸ ಮಾಡುತ್ತದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ ಎಂದರು.