ಕಾಲೇಜ್ ಯುವತಿಯರಿಗೆ ಆಸಿಡ್ ಎರಚಿದ ಯುವಕ

geetha

ಸೋಮವಾರ, 4 ಮಾರ್ಚ್ 2024 (16:42 IST)
ಕಡಬ :ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆದಿದೆ. ಕಿರಾತಕನೋರ್ವ ಮೂವರು ಹೆಣ್ಣು ಮಕ್ಕಳ ಮೇಲೆ ಆ್ಯಸಿಡ್ ಎರಚಿದ್ದಾನೆ. ಮೂವರು ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಪೊಲೀಸರು ಆರೋಪಿ ಅಬಿನ್ನನ್ನು ಬಂಧಿಸಿದ್ದು ವಿಚಾರಣೆಯನ್ನ ಮಾಡ್ತಿದ್ದಾರೆ.

ಮುಸುಕುಧಾರಿ ಅಪರಿಚಿತ ವ್ಯಕ್ತಿಯೊಬ್ಬ ಏಕಾಏಕಿ ಕಾಲೇಜಿನ ಆವರಣದೊಳಗೆ ನುಗ್ಗಿ ವಿದ್ಯಾರ್ಥಿನಿಯರ ಮೇಲೆ ಆಸಿಡ್‌ ದಾಳಿ ನಡೆಸಿರುವ ಘಟನೆ ಸೋಮವಾರ ಕಡಬದ  ಪದವಿಪೂರ್ವ ಕಾಲೇಜಿನಲ್ಲಿ ನಡೆದಿದೆ. ಘಟನೆಯಲಿ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲಿನ ಸಿ.ಬಿ, ಅರ್ಚನಾ ಮತ್ತು ಅಮೃತ ಗಾಯಗೊಂಡ ವಿದ್ಯಾರ್ಥನಿಯರಾಗಿದ್ದಾರೆ. ಆರೋಪಿಯಾದ ಕೇರಳ ಮೂಲದ ಅಬೀನ್‌ (23) ಎಂಬಾತನನ್ನು   ಹಿಡಿದು ವಿದ್ಯಾರ್ಥಿಗಳು ಆತನನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದು, ವಿದ್ಯಾರ್ಥಿನಿಯರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 
ಯಾವ ಕಾರಣಕ್ಕಾಗಿ ಈತ ದಾಳಿ ನಡೆಸಿದ ಎಂಬುದು ಇನ್ನೂ ತಿಳಿದುಬಂದಿಲ್ಲ. 
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ