ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡುವುದೇ ಈತನ ಕಾಯಕ!

ಶುಕ್ರವಾರ, 4 ಮಾರ್ಚ್ 2022 (11:00 IST)
ಬೆಂಗಳೂರು: ಯುವತಿಯರನ್ನು ಪರಿಚಯಿಸಿಕೊಂಡು ಅವರ ಅಶ್ಲೀಲ ವಿಡಿಯೋ ಸಂಗ್ರಹಿಸಿ ಬ್ಲ್ಯಾಕ್ ಮೇಲ್ ಮಾಡುವುದನ್ನೇ ಕಾಯಕವಾಗಿಸಿದ್ದ ವ್ಯಕ್ತಿಯನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ.

ವಿಜಯಪುರದಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದ 31 ವರ್ಷದ ಪ್ರಶಾಂತ್ ಎಂಬಾತ ಆರೋಪಿ. ಈತ ಅಪರಿಚಿತ ಯುವತಿಯರಿಗೆ ವ್ಯಾಟ್ಸಪ್ ಮೂಲಕ ಸಂದೇಶ ಕಳುಹಿಸಿ ಪರಿಚಯ ಮಾಡಿಕೊಳ್ಳುತ್ತಿದ್ದ. ಅವರ ಜೊತೆ ಸಲುಗೆ ಬೆಳೆಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಅಶ್ಲೀಲ ವಿಡಿಯೋಗಳನ್ನು ಸಂಗ್ರಹಿಸುತ್ತಿದ್ದ. ಬಳಿಕ ವಿಡಿಯೋ ಇಟ್ಟುಕೊಂಡು ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ.

ಈತನ ಜಾಲಕ್ಕೆ ಬಿದ್ದ ಯುವತಿಯೊಬ್ಬಳು ಪೊಲೀಸರಿಗೆ ದೂರು ನೀಡಿದ್ದಳು. ಅದರಂತೆ ಸೈಬರ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ