ಆಶೀಲಿಲ್ಲ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ವ್ಯಕ್ತಿ ಬಂಧನ

ಶುಕ್ರವಾರ, 18 ಫೆಬ್ರವರಿ 2022 (18:41 IST)
ವಾಟ್ಸ್​ಆಯಪ್​​​​, ಫೇಸ್​​​​ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಮಹಿಳೆಯರಿಗೆ ಆಶ್ಲೀಲ ಫೋಟೋ ಕಳುಹಿಸಿ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ‌.
ಹಾಸನ ಅರಕಲಗೂಡಿನ ಕಂಚೇನಹಳ್ಳಿ ನಿವಾಸಿ ಹರೀಶ್ ಬಂಧಿತ ಆರೋಪಿ. ಈತ ಕಳೆದ ಮೂರು ತಿಂಗಳಿಂದ ಮಹಿಳೆಯೊಬ್ಬರಿಗೆ ವಾಟ್ಸ್​ಆಯಪ್​​​, ಫೇಸ್​​ಬುಕ್​ ಮೂಲಕ ಅಶ್ಲೀಲ ವಿಡಿಯೋಗಳನ್ನು ಕಳುಹಿಸುತ್ತಿದ್ದನು. ಪದೇ ಪದೆ ವಿಡಿಯೋ ಕರೆ ಮಾಡಿ ಕಿರುಕುಳ ನೀಡುತ್ತಿದ್ದನಂತೆ. ಇದರಿಂದ ಬೇಸತ್ತ ಮಹಿಳೆ ಪೊಲೀಸ್ ​ಠಾಣೆಯಲ್ಲಿ ಕೇಸ್​ ದಾಖಲಿಸಿದ್ದರು.
 
ತನಿಖೆ ಕೈಗೊಂಡ ಇನ್ಸ್​ಪೆಕ್ಟರ್​​​ಎಸ್​.ಟಿ.ಯೋಗೇಶ್​​​​ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿತ್ತು. ಈ ವೇಳೆ, ಆರೋಪಿ ನಿತ್ಯ ಹತ್ತಾರು ಮಹಿಳೆಯರಿಗೆ ಆಶ್ಲೀಲ ಫೋಟೋಸ್ ಹಾಗೂ ವಿಡಿಯೋ ಕಳುಹಿಸಿ ಕಿರುಕುಳ ನೀಡುತ್ತಿದ್ದ ಬಗ್ಗೆ ಬೆಳಕಿಗೆ ಬಂದಿದೆ. ಸದ್ಯ ಆರೋಪಿಯನ್ನು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ‌.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ