ಕೇಂದ್ರದ ವಿರುದ್ಧ ಯೂತ್​ ಕಾಂಗ್ರೆಸ್​ ಪ್ರೊಟೆಸ್ಟ್

ಬುಧವಾರ, 5 ಜುಲೈ 2023 (19:30 IST)
ಬಿಜೆಪಿ ವಿರುದ್ಧ ಯೂತ್ ಕಾಂಗ್ರೆಸ್ ಅಕ್ಕಿ ಸಮರ ಸಾರಿದೆ. ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಬೆಂಗಳೂರಿನ ಬಿಜೆಪಿ ಕಚೇರಿ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಿಸಿದೆ.. ಹೀಗಾಗಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್​​​​ ನಲಪಾಡ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸಂಸದರ ಕಚೇರಿಗಳಿಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು. ಇನ್ನು ಚಿತ್ರದುರ್ಗ, ಮೈಸೂರು, ಚಿಕ್ಕಮಗಳೂರಲ್ಲಿ ಬಿಜೆಪಿ ವಿರುದ್ಧ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ