ಯುವಕನಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ ಮತ್ತೇ ಪೊಲೀಸ್ ಕಸ್ಟಡಿಗೆ
ಡಾ.ಸೂರಜ್ ರೇವಣ್ಣ ವಿರುದ್ಧ ಯುವಕನೊಬ್ಬ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಅಸ್ವಭಾವಿಕ ಲೈಂಗಿಕ ದೌರ್ಜನ್ಯ ಆರೋಪದಡಿ ದೂರು ನೀಡಿದ್ದ. ಪ್ರಕರಣ ಸಂಬಂಧ ಜೂನ್ 22ರಂದು ಸೂರಜ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದರು. ನಂತರ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ 8 ದಿನ ಸಿಐಡಿ ಕಸ್ಟಡಿಗೆ ಒಪ್ಪಿಸಲಾಗಿತ್ತು.
ಇಂದು ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಕೋರ್ಟ್‌ಗೆ ಸೂರಜ್ ಅವರನ್ನು ಹಾಜರುಪಡಿಸಲಾಗಿತ್ತು. ಹೀಗಾಗಿ ಪ್ರಕರಣದ ವಿಚಾರಣೆ ನಡೆಸಿರುವ ಕೋರ್ಟ್ ಸೂರಜ್‌ಗೆ ಜುಲೈ 3ರವರೆಗೆ ಕಸ್ಟಡಿ ವಿಸ್ತರಿಸಿದೆ.