ಯುವಕನಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ 8 ದಿನ ಸಿಐಡಿ ಕಸ್ಟಡಿಗೆ
ಇಂದು ಸೂರಜ್ ರೇವಣ್ಣ ಅವರನ್ನು ಪೊಲೀಸರು ಕೋರ್ಟ್‌ಗೆ ಹಾಜರು ಪಡಿಸಿದರು. ವಿಚಾರಣೆ ವೇಳೆ ಸರ್ಕಾರಿ ವಕೀಲರು 14 ದಿನ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದು, ಅದರಂತೆ ನ್ಯಾಯಾಧೀಶರು 8 ದಿನ ಪೊಲೀಸ್ ಕಸ್ಟಡಿಗೆ ನೀಡಿದರು.
ಇನ್ನೂ ಪೊಲೀಸ್ ಕಸ್ಟಡಿ ಅವಧಿ ಜುಲೈ 1ಕ್ಕೆ ಮುಗಿಯುತ್ತಿದ್ದು, ಅಂದು ಸಂಜೆ 4 ಗಂಟೆಗೆ ಸೂರಜ್ ರೇವಣ್ಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸುವಂತೆ ನ್ಯಾಯಾಧೀಶರು ಸಿಐಡಿ ಪೊಲೀಸರಿಗೆ ಸೂಚಿಸಿದ್ದಾರೆ.