ಬೆಳ್ತಂಗಡಿ : ಧರ್ಮಸ್ಥಳದ ಸುತ್ತಾಮುತ್ತಾ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಬಗ್ಗೆ ದೂರುದಾರನ ಮಾಹಿತಿ ರಿವೀಲ್ ಮಾಡಿ, ಕಾಲ್ಪನಿಕ ಕಥೆಕಟ್ಟಿ ವಿಡಿಯೋ ಪ್ರಸಾರ ಮಾಡಿದ ಆರೋಪದ ಮೇಲೆ ಸಮೀರ್ ಎಮ್‌ಡಿಗೆ ಎಸ್‌ಐಟಿ ನೋಟಿಸ್ ಜಾರಿ ಮಾಡಿದೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸರು ಮೂರು ಭಾರಿ ನೋಟಿಸ್ ನೀಡಿದ್ರೂ ವಿಚಾರಣೆಗೆ ಹಾಜರಾಗದೆ ಇರುವ ಕಾರಣ ಆ.21 ರಂದು ಧರ್ಮಸ್ಥಳ ಪೊಲೀಸರು ಬೆಂಗಳೂರು ಬಾಡಿಗೆ ಮನೆಯಿಂದ ಬಂಧಿಸಲು ಹೋಗಿದ್ದು ಈ ವೇಳೆಗೆ ಸಂಜೆ ಮಂಗಳೂರು ಕೋರ್ಟ್ ನಿಂದ ಆ.21 ರಂದು ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾನೆ.
ಸಮೀರ್‌ಗೆ ನೋಟಿಸ್‌ನಲ್ಲಿ ವಿಚಾರಣೆಗೆ ಹಾಜರಾಗಬೇಕು, ಸಾಕ್ಷಿ ನಾಶ ಮಾಡಬಾರದೆಂದು ಕೋರ್ಟ್ ಷರತ್ತು ವಿಧಿಸಿದೆ.
ಅದರಂತೆ ಧರ್ಮಸ್ಥಳ ಪೊಲೀಸರ ವಿಚಾರಣೆ ಬಾಕಿ ಇರುವ ಕಾರಣದಿಂದ ಆ.22 ರಂದು ಮತ್ತೆ ಸಮೀರ್.ಎಮ್.ಡಿ ಗೆ ವಿಚಾರಣೆಗೆ ಆ.23 ರಂದು 10 ಗಂಟೆಗೆ ಧರ್ಮಸ್ಥಳ ಪೊಲೀಸ್ ಠಾಣೆ ಅಥವಾ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿಗೆ ಖುದ್ದು ಹಾಜರಾಗಿ ವಿಚಾರಣೆ ಎದುರಿಸಲು ನೋಟಿಸ್ ಜಾರಿ ಮಾಡಿದ್ದಾರೆ. ಇನ್ನೂ ದೂತ ಸಮೀರ್.ಎಮ್.ಡಿ ವಿಚಾರಣೆಗೆ ಹಾಜರಾಗುತ್ತಾ ಎಂದು ಕಾದು ನೋಡಬೇಕು.