ಗಣ್ಯವ್ಯಕ್ತಿಗಳು, ಸರ್ಕಾರದ ಉನ್ನತ ನಾಯಕರು ಪರಿಚಯವಿದೆ ಎಂದು ಬಿಂಬಿಸಿಕೊಂಡಿದ್ದ ಯುವರಾಜ್ ಸ್ವಾಮಿ, ಸರ್ಕಾರಿ ಕೆಲಸ ಕೊಡಿಸುವುದಾಗಿ ಜನರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ. ಈ ಸಂಬಂಧ ಈತನ ವಿರುದ್ಧ ಜ್ಞಾನಭಾರತಿ, ಅನ್ನಪೂರ್ಣೇಶ್ವರಿ ನಗರ, ಹೈಗ್ರೌಂಡ್ಸ್, ಕೆಂಗೇರಿ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ವಂಚನೆ ಪ್ರಕರಣಗಳು ದಾಖಲಾಗಿದ್ದವು. ಬಳಿಕ ಸಿಸಿಬಿ ಪೊಲೀಸರು ಆರೋಪಿ ಯುವರಾಜ್‌ನನ್ನು ಬಂಧಿಸಿದ್ದರು. ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಸಿಸಿಬಿ ಪೊಲೀಸರು ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. ಸದ್ಯ ಯುವರಾಜ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿ ಸಜೆ ಅನುಭವಿಸುತ್ತಿದ್ದಾನೆ.