ಮುಸ್ಲಿಮರಿಗೆ ಮೀಸಲಾತಿ, ನಾನು ಪತ್ರವೇ ಬರೆದಿಲ್ಲ ಎಂದ ಜಮೀರ್ ಅಹ್ಮದ್

Krishnaveni K

ಮಂಗಳವಾರ, 12 ನವೆಂಬರ್ 2024 (14:29 IST)
ಬೆಂಗಳೂರು: ಮುಸ್ಲಿಮರಿಗೆ ಸಿವಿಲ್ ಗುತ್ತಿಗೆ ಕಾಮಗಾರಿಗಳಲ್ಲಿ ಶೇ.4 ರಷ್ಟು ಮೀಸಲಾತಿ ನೀಡಬೇಕು ಎಂಬ ಪ್ರಸ್ತಾವನೆ ಬಗ್ಗೆ ಭಾರೀ ವಿವಾದ ಎದ್ದಿರುವ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯಿಸಿದ್ದಾರೆ.
 

ಸಿವಿಲ್ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತು ನೀಡಬೇಕು ಎನ್ನುವ ಅಲ್ಪ ಸಂಖ್ಯಾತ ಇಲಾಖೆ ಮತ್ತು ಮುಸ್ಲಿಂ ಸಮುದಾಯದ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಶಾಸಕರಿಂದ ಪ್ರಸ್ತಾವನೆ ಬಂದಿದ್ದು ಇದಕ್ಕೆ ಸಿಎಂ ಸಿದ್ದರಾಮಯ್ಯ ಸಹಿ ಹಾಕಿದ್ದಾರೆ. ಚಳಿಗಾಲದ ಅಧಿವೇಶನದಲ್ಲಿ ತಿದ್ದುಪಡಿ ಮಂಡಿಸಲಾಗುತ್ತದೆ ಎಂಬ ಸುದ್ದಿ ಬಂದಿತ್ತು.

ಇದರ ಬೆನ್ನಲ್ಲೇ ಭಾರೀ ವಿವಾದ ಆರಂಭವಾಗಿದೆ. ಉಪಚುನಾವಣೆ ಹೊಸ್ತಿಲಲ್ಲಿ ವಿವಾದ ಭುಗಿಲೇಳುವ ಲಕ್ಷಣ ಕಾಣುತ್ತಿದ್ದಂತೇ ಸಿಎಂ ಕಚೇರಿ ಇಂತಹದ್ದೊಂದು ನಿರ್ಧಾರ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿ ವಿವಾದ ತಣ್ಣಗಾಗಿಸಲು ಯತ್ನಿಸಿದೆ. ಇದರ ಬೆನ್ನಲ್ಲೇ ಈಗ ಜಮೀರ್ ಅಹ್ಮದ್ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.

‘ನಾನು ಯಾವುದೇ ಬೇಡಿಕೆ ಇಟ್ಟಿಲ್ಲ. ನಾನು ಪತ್ರವನ್ನೂ ಬರೆದಿಲ್ಲ. ನನಗೆ ಈ ಬಗ್ಗೆ ಗೊತ್ತೇ ಇಲ್ಲ. ಮುಸ್ಲಿಮರಿಗೆ ಮೀಸಲಾತಿ ಕೊಡಬೇಕು ಎಂದು ನಾವೇನೂ ಒತ್ತಾಯ ಮಾಡಿಲ್ಲ. ಇದಕ್ಕೆ ಈಗಾಗಲೇ ಸಿಎಂ ಕಚೇರಿಯಿಂದಲೂ ಸ್ಪಷ್ಟನೆ ಕೊಟ್ಟಿದ್ದಾರೆ’ ಎಂದು ಜಮೀರ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ