ಬೆಂಗಳೂರು : ಮಿಡಿಯಾ ಪೇಜ್ ಗೆ ಚಾಲನೆ ನೀಡುವ ವೇಳೆ ಶಾಸಕ ಜಮೀರ್ ಅಹ್ಮದ್ ಎಡವಟ್ಟೊಂದನ್ನು ಮಾಡಿದ್ದಾರೆ.
ಜೂನ್ 28ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಜಮೀರ ಅಹ್ಮದ್ ಅಭಿಮಾನಿ ಬಳಗದಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಆ ವೇಳೆ ಕಾರ್ಯಕ್ರಮಕ್ಕೆ ಆಗಮಿಸಿದ ಜಮೀರ್ ಅಹ್ಮದ್ ಗೆ ಅವರ ಬೆಂಬಲಿಗರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಪಾದ ಪೂಜೆ ಮಾಡಿದ್ದಾರೆ.
ರಾಜ್ಯದೆಲ್ಲೆಡೆ ಕೊರೊನಾ ಪ್ರಕರಣ ಹೆಚ್ಚುತ್ತಿದ್ದರೂ ಒಬ್ಬ ಜವಾಬ್ದಾರಿಯುತ ಶಾಸಕರಾಗಿ ಜಮೀರ್ ಅಹ್ಮದ್ ಕೊವಿಡ್ ನಿಯಮಗಳನ್ನು ನಿರ್ಲಕ್ಷ್ಯ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.