ರಾಜ್ಯದ 541 ಪಿಯು ಕಾಲೇಜುಗಳಲ್ಲಿ ಈ ವರ್ಷ ಶೂನ್ಯ ದಾಖಲಾತಿ

ಮಂಗಳವಾರ, 12 ಜುಲೈ 2022 (20:49 IST)
ಕಳೆದ ಮೂರು ವರ್ಷಗಳಿಂದ ರಾಜ್ಯದ 541 ಅನುದಾನರಹಿತ ಖಾಸಗಿ ಪದವಿ ಪೂರ್ವ ಕಾಲೇಜುಗಳಲ್ಲಿ ಒಬ್ಬ ವಿದ್ಯಾರ್ಥಿಯೂ ದಾಖಲಾಗಿಲ್ಲ. ನಿಯಮ ಪ್ರಕಾರ, ಇಂತಹ ಕಾಲೇಜುಗಳಲ್ಲಿ ದಾಖಲಾತಿಗೆ ನಿರ್ಬಂಧ ಬೀಳುತ್ತದೆ. ಆದರೆ, ಕೋವಿಡ್ ಹಿನ್ನೆಲೆಯಲ್ಲಿ ಈ ವರ್ಷದ ಮಟ್ಟಿಗೆ ನಿರ್ಬಂಧದಿಂದ ಷರತ್ತು ಬದ್ಧ ವಿನಾಯಿತಿ ನೀಡಲು ಸರ್ಕಾರ ಅನುಮೋದನೆ ನೀಡಿದೆ. ಷರತ್ತಿನ ಪ್ರಕಾರ ಈ ವರ್ಷ ಕನಿಷ್ಠ 40 ವಿದ್ಯಾರ್ಥಿಗಳು ಆ ಕಾಲೇಜುಗಳಲ್ಲಿ ದಾಖಲಾತಿ ಪಡೆದಿರಬೇಕು. ದಾಖಲಾತಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಕಾಲೇಜಿನವರು ನೀಡಿದ ಮಾಹಿತಿ ಆಧರಿಸಿ ಇಲಾಖೆಯು ಒಂದು ಪರಿಶೀಲನೆ ನಡೆಸಲಿದೆ. ಪರಿಶೀಲನೆ ವೇಳೆ 40 ವಿದ್ಯಾರ್ಥಿಗಳ ದಾಖಲಾತಿ ಹಾಗೂ ಆ ಮಕ್ಕಳಿಗೆ ಶಿಕ್ಷಣ ನೀಡಲು ಅಗತ್ಯ ಮೂಲ ಸೌಕರ್ಯ ಹಾಗೂ ಬೋಧಕ ವರ್ಗ ಕಾಲೇಜಿನಲ್ಲಿ ಇರುವುದು ಖಚಿತವಾದರೆ 2022-23ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಕಾಲೇಜು ನಡೆಸಲು ಅನುಮತಿ ನೀಡಲಾಗುತ್ತದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ