ಜಡ್ಜ್ ಮುಂದೆ ಹಾಜರಾಗುವ ಮುನ್ನಾ ಆಸ್ಪತ್ರೆಗೆ ರೇವಣ್ಣ

Sampriya

ಶನಿವಾರ, 4 ಮೇ 2024 (19:41 IST)
Photo Courtesy X
ಬೆಂಗಳೂರು:  ಸಂತ್ರಸ್ತೆ ಮಹಿಳೆಯನ್ನು ಅಪಹರಣ ಮಾಡಿದ ಪ್ರಕರಣ ಸಂಬಂಧ ವಶಕ್ಕೆ ಪಡೆದಿರುವ ಶಾಸಕ ಎಚ್ ಡಿ ರೇವಣ್ಣ ಅವರನ್ನು ಆರೋಗ್ಯ ತಪಾಸಣೆ ನಡೆಸಿದ ನಂತರ  ಜಡ್ಜ್ ಮುಂದೆ ಹಾಜರು ಪಡಿಸಲಿದ್ದಾರೆ.

ಎಚ್ ಡಿ ದೇವೇಗೌಡರ ಮನೆಯಲ್ಲಿ ಶಾಸಕ ಎಚ್ ರೇವಣ್ಣ ಅವರನ್ನು ಎಸ್‌ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಿಗಿ ಭದ್ರತೆಯಲ್ಲಿ ಇದೀಗ ರೇವಣ್ಣ ಅವರನ್ನು ಜಡ್ಜ್ ಮುಂದೆ ಹಾಜರು ಪಡಿಸಲಿದ್ದಾರೆ. ಇನ್ನೂ ರೇವಣ್ಣ ಅವರನ್ನು ಎಷ್ಟು ದಿನದ ಕಸ್ಟಡಿಗೆ ವಹಿಸಲಿದ್ದಾರೆಂಬುದು ಜಡ್ಜ್‌ ಹೇಳಲಿದ್ದಾರೆ.

ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡ ಕ್ರಿಮಿನಲ್ ಪ್ರಕರಣದಲ್ಲಿ; ಮಹಿಳೆಯೊಬ್ಬರ ಅಪಹರಣದ ಪ್ರಕರಣದಲ್ಲಿ ಹೊಳೆನರಸೀಪುರ ಶಾಸಕ ಎಚ್ ಡಿ ರೇವಣ್ಣ ಅವರುನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಈ ಕುರಿತ ಅರ್ಜಿಯನ್ನು ಮಧ್ಯಾಹ್ನ 3 ಗಂಟೆಯಿಂದ 4.30ರವರೆಗೂ ವಿಚಾರಣೆ ಅಲಿಸಿ ಕಾಯ್ದಿರಿಸಿದ್ದ ಆದೇಶವನ್ನು 'ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ'ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಸಂಜೆ 6.23ಕ್ಕೆ ಪ್ರಕಟಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ