ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ದರಾಗಿರಬೇಕು-ಸಿಎಂ ಸಿದ್ದರಾಮಯ್ಯ

geetha

ಬುಧವಾರ, 31 ಜನವರಿ 2024 (15:00 IST)
ಬೆಂಗಳೂರು :ವಿಧಾನಸೌಧದಲ್ಲಿ  ನಡೆದ  ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂವಿಧಾನದ ಬಗ್ಗೆ ಬದ್ದತೆ ಇಲ್ಲದವರಿಗೆ ಇಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಚ್ಚರಿಕೆ ನೀಡಿದರು.ನಿಮ್ಮ ಅನುಭವಗಳು ಜಿಲ್ಲಾಡಳಿತಕ್ಕೆ ನೆರವಾಗಬೇಕು. ಸರ್ಕಾರದ ಯೋಜನೆಗಳು, ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಲು, ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ಷಿಪ್ರ ತೀರ್ಮಾನ ತೆಗೆದುಕೊಳ್ಳಲು ನೆರವಾಗಬೇಕು ಎನ್ನುವ ಕಾರಣಕ್ಕೆ ನಿಮ್ಮನ್ನು ನೇಮಿಸಲಾಗಿದೆ ಎಂದ ಸಿದ್ದರಾಮಯ್ಯ, ಸರ್ಕಾರ ಬಂದು 8 ತಿಂಗಳಾಗಿದೆ. DC, CEO ಸಭೆ ನಡೆಸಿ ಹಲವು ಸೂಚನೆಗಳನ್ನು ನೀಡಿ 3-4 ತಿಂಗಳಾಗಿದೆ. ನೀವು ಉಸ್ತುವಾರಿ ವಹಿಸಿದ ಮೇಲೆ ಆಡಳಿತಾತ್ಮಕವಾಗಿ ಏನು ಬದಲಾವಣೆ ಆಗಿದೆ ಎನ್ನುವ ಮಾಹಿತಿಗಳನ್ನು ಸಭೆಗೆ ನೀಡಬೇಕು ಎಂದರು. 

ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಕೆಲವೇ ಕೆಲವು ಫಲಾನುಭವಿಗಳಿಗೆ ತಲುಪಲು ಆಗಿರುವ ತಾಂತ್ರಿಕ ಸಮಸ್ಯೆ ಬಗೆಹರಿಸಲು ಇನ್ನೂ ಏಕೆ ಆಗಿಲ್ಲ ಎಂದು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿಗಳು, "ಕೆಲವರಿಗೆ ಮಾತ್ರ ಗ್ಯಾರಂಟಿ ಅನುಕೂಲ ತಲುಪಿಲ್ಲ. ಈ ಕೆಲವರೇ ಹೆಚ್ಚು ಹೇಳಿಕೊಂಡು ತಿರುಗುತ್ತಿದ್ದಾರೆ. ಗ್ಯಾರಂಟಿ ಯೋಜನೆಯ ಅನುಕೂಲ ಪಡೆಯುತ್ತಿರುವವರು ಮೌನವಾಗಿದ್ದಾರೆ. ಆದ್ದರಿಂದ ತಾಂತ್ರಿಕ ಸಮಸ್ಯೆ ಮೊದಲು ಬಗೆಹರಿಸಿ  ಎಂದು ಸಿಎಂ ಸಿದ್ದರಾಮಯ್ಯ  ತಾಕೀತು ಮಾಡಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ