ಟೋಲ್ನಲ್ಲಿ ತಾಂತ್ರಿಕ ಸಮಸ್ಯೆ; ಸವಾರರು ಗರಂ
ಟೋಲ್ ಸಂಗ್ರಹ ಆರಂಭವಾದ ಮೊದಲ ದಿನವೇ ಬೆಳ್ಳಂ ಬೆಳಗ್ಗೆಯೇ ಟೋಲ್ ಸಿಬ್ಬಂದಿ ವಿರುದ್ಧ ವಾಹನ ಸವಾರರು ಸಿಡಿಮಿಡಿಗೊಂಡಿದ್ದಾರೆ. ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಟೋಲ್ ಸಂಗ್ರಹಕ್ಕೆ ಸರಿಯಾದ ಸಿದ್ಧತೆ ಮಾಡಿಕೊಂಡಿರಲಿಲ್ಲ. ಟೆಕ್ನಿಕಲ್ ಎರರ್ ಆಗುತ್ತಿತ್ತು.. ಫಾಸ್ಟ್ಯಾಗ್ ಇದ್ರೂ ಟೋಲ್ ಪ್ಲಾಜಾ ಸ್ಕ್ಯಾನ್ ತೆಗೆದುಕೊಳ್ಳುತ್ತಿಲ್ಲ. ಸ್ಕ್ಯಾನ್ ಆಗೋದ್ರಲ್ಲಿ ವಿಳಂಬವಾಗುತ್ತಿದೆ. ಅಲ್ಲದೆ ಟೋಲ್ ಕಂಬಿ ಕೂಡ ಸರಿಯಾಗಿ ವರ್ಕ್ ಆಗುತ್ತಿಲ್ಲ. ಸ್ಕ್ಯಾನ್ ಆಗಿ ವಾಹನ ಚಲಿಸುವಾಗಲೇ ವಾಹನದ ಮೇಲೆ ಕಂಬಿ ಬೀಳುತ್ತಿದೆ. ಹೀಗಾಗಿ ವಾಹನ ಚಾಲಕರು ಗರಂ ಆಗಿದ್ದಾರೆ. ಸಿದ್ಧತೆ ಮಾಡಿಕೊಳ್ಳದೇ ಯಾಕೆ ಟೋಲ್ ತಗೋತಿರಿ ಅಂತ ಸವಾರರು ಅವಾಜ್ ಹಾಕುತ್ತಿದ್ದಾರೆ.