ದಲಿತ ಸಂಘರ್ಷ ಸಮಿತಿಯಿಂದ ಬೆಂಗಳೂರು ನಗರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಎದುರು ಇಂದು ನೂರಾರು ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸಿದ್ರು. ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶಿವಕುಮಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಭೃಷ್ಟಾಚಾರದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ತೊಡಗಿದ್ದಾರೆ, ಹಾಸ್ಟೆಲ್ ಗಳಲ್ಲಿ ವಿಧ್ಯಾರ್ಥಿಗಳಿಗೆ ಕಳಪೆ ಊಟ ಕೊಡಲಾಗ್ತಿದೆ, ಹಾಸ್ಟೆಲ್ ಗಳಲ್ಲಿ ಮಕ್ಕಳಿಗೆ ಸರಿಯಾದ ವ್ಯವಸ್ಥೆ ಇಲ್ಲ, ರಾಜ್ಯದ ಮೂಲೆ ಮೂಲೆ ಯಿಂದ ವಿಧ್ಯಾರ್ಥಿಗಳು ಬೆಂಗಳೂರಿಗೆ ಶಿಕ್ಷಣಕ್ಕಾಗಿ ಬರ್ತಾರೆ, ಖೈದಿಗಳಿಗೆ ಸಿಗುವ ವ್ಯವಸ್ಥೆಯೂ ಹಾಸ್ಟೆಲ್ ವಿಧ್ಯಾರ್ಥಿಗಳಿಗೆ ಸಿಗ್ತಿಲ್ಲ, ಅಂತ ಶಿವಕುಮಾರ್ ವಿರುದ್ಧ ಮೇಲಾಧಿಕಾರಿಗಳಿಗೆ ಮನವಿ ಮಾಡಿದ್ದೇವೆ ಎಂದು ತಿಳಿಸಿದ್ರು.