ಬೆಂಗಳೂರು: ರಾಜ್ಯದಾದ್ಯಂತ ಫೆ.14ರ ವರೆಗೆ ಒಣಹವೆ ಇರಲಿದೆ. ರಾಜ್ಯ ರಾಜಧಾನಿಯಲ್ಲಿ ಬೆಂಗಳರಿನಲ್ಲಿ ದಿನೇ ದಿನೇ ಗರಿಷ್ಠ ಉಷ್ಣಾಂಶ ದಾಖಲಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ ಎರಡು ದಿನಗಳಿಂದ ಬೆಂಗಳೂರಲ್ಲಿ 32 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತಿದೆ. ಎರಡು ದಿನಗಳ ಹಿಂದೆ ಬಾಗಲಕೋಟೆ ಹಾಗೂ ವಿಜಯಪುರದಲ್ಲಿ ಅತಿ ಹೆಚ್ಚಿನ ಉಷ್ಣಾಂಶ ದಾಖಲಾಗಿತ್ತು. ಎರಡು ಜಿಲ್ಲೆಗಳಲ್ಲೂ 37.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ವರದಿಯಾಗಿದೆ.
ಬೆಂಗಳೂರಿನಲ್ಲಿ 31.9, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 32.5, ಬೆಂಗಳೂರು ಹೆಚ್ಎಎಲ್ ಏರ್ಪೋರ್ಟ್ನಲ್ಲಿ 31.2 ಡಿ.ಸೆ ಉಷ್ಣಾಂಶ ದಾಖಲಾಗಿದೆ. ಗದಗ, ಹಾವೇರಿ, ಕೊಪ್ಪಳದಲ್ಲಿ ತಲಾ 35.5 ಡಿ.ಸೆ. ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.