ಲಾಕ್ ಡೌನ್ ಸಂದರ್ಭದಲ್ಲಿ ಈ ಕೆಲಸ ಮಾಡೋದಕ್ಕೆ ಯಾವುದೇ ನಿರ್ಬಂಧ ಇಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಕೃಷಿಯ ದೈನಂದಿನ ಚಟುವಟಿಕೆಗಳು ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳದಂತೆ ಕ್ರಮ ಕೈಗೊಳ್ಳುವುದರ ಜತೆಗೆ ಕೃಷಿ ಉತ್ಪನ್ನಗಳ ಮಾರಾಟ, ಸಾಗಾಣಿಕೆ ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಬೀಜ-ಗೊಬ್ಬರ ಮತ್ತಿತರ ಸಾಮಗ್ರಿಗಳ ಪೂರೈಕೆ ವ್ಯತ್ಯಯವಾಗಬಾರದು. ಈ ಕುರಿತು ಎಲ್ಲ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕೃಷಿ ಇಲಾಖೆಯ ಸಚಿವ ಬಿ.ಸಿ.ಪಾಟೀಲ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಮಳೆಯಾದರೆ ರೈತರಿಗೆ ಬೀಜ, ಗೊಬ್ಬರ ಮತ್ತಿತರ ಸಾಮಗ್ರಿಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಲಾಕ್ ಡೌನ್ ಹಿನ್ನೆಲೆಯಲ್ಲಿ ರೈತರು ಬೆಳೆದ ತರಕಾರಿ, ಹಣ್ಣುಗಳ ಮಾರಾಟ ಹಾಗೂ ಸಾಗಾಣಿಕೆಗೆ ಯಾವುದೇ ಅನಾನುಕೂಲ
ಆಗದಂತೆ ಬಿತ್ತನೆ, ಬೀಜ-ಗೊಬ್ಬರ ಮತ್ತು ಕೀಟನಾಶಕಗಳ ಮಾರಾಟ, ಸಾಗಾಣಿಕೆ ಸಮರ್ಪಕವಾಗಿ ಇರಬೇಕು.
ಕೃಷಿ ಯಂತ್ರೋಪಕರಣಗಳು ಮತ್ತಿತರ ಸಾಮಗ್ರಿಗಳ ಮಾರಾಟ ವ್ಯವಸ್ಥೆಯನ್ನು ಯಥಾಪ್ರಕಾರ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.