ಮಹಿಳೆಯರಿಗೆ ಅಶ್ಲೀಲ ವಿಡಿಯೋ ಕಳುಹಿಸುತ್ತಿದ್ದ ವ್ಯಕ್ತಿ ಬಂಧನ
ಫೇಸ್ ಬುಕ್ ಮುಖಾಂತರ ಮಹಿಳೆಯರ ಸ್ನೇಹ ಸಂಪಾದಿಸುತ್ತಿದ್ದ ವ್ಯಕ್ತಿ ಅವರಿಂದ ಮೊಬೈಲ್ ನಂಬರ್ ಪಡೆದು ಅಶ್ಲೀಲ ವಿಡಿಯೋಗಳನ್ನು ಕಳುಹಿಸುತ್ತಿದ್ದ. ಬಳಿಕ ಅವರೊಂದಿಗೆ ವ್ಯಾಟ್ಸಪ್ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿದ್ದ.
ಆತನಿಂದ ಕಿರುಕುಳಕ್ಕೊಳಗಾದ ಮಹಿಳೆಯರು ಪೊಲೀಸರಿಗೆ ದೂರು ನೀಡಿದ್ದರು. ಈತನಿಂದ ಕಿರುಕುಳಕ್ಕೊಳಗಾದ ಇನ್ನಷ್ಟು ಮಂದಿ ದೂರು ನೀಡಬಹುದು ಎಂದು ಆಗ್ನೇಯ ವಿಭಾಗದ ಸೆನ್ ಠಾಣೆಗೆ ದೂರು ನೀಡಬಹುದು ಎಂದು ಪೊಲೀಸರು ಹೇಳಿದ್ದಾರೆ.