ಲೋಕಸಭೆ ಚುನಾವಣೆಯ ನಂತರ ಕಾಂಗ್ರೆಸ್ ನವರ ಅಡ್ರೆಸ್ ಇರಲ್ಲ. ಚುನಾವಣೆಯಲ್ಲಿ ಕೈ ನಾಯಕರಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಕಲಬುರಗಿಯಲ್ಲಿ ನಡೆದ ವೀರಶೈವ - ಲಿಂಗಾಯತ ಸಮಾವೇಶದಲ್ಲಿ ಯಡಿಯೂರಪ್ಪ ಹೇಳಿಕೆ ನೀಡಿದ್ದು, ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಸಂಘ ಪರಿವಾರದ ಒಂದು ನಾಯಿಯೂ ಸತ್ತಿಲ್ಲ ಅಂತಾ ಖರ್ಗೆ ಹೇಳ್ತಾರೆ. ಶಾಮ ಪ್ರಸಾದ್ ಮುಖರ್ಜಿ ಮತ್ತಿತರರು ಹೋರಾಟಗಾರರಲ್ಲವೇ ಎಂದು
ಮಲ್ಲಿಕಾರ್ಜುನ ಖರ್ಗೆಗೆ ಯಡಿಯೂರಪ್ಪ ಪ್ರಶ್ನೆ ಮಾಡಿದ್ರು.
ಹಣ ಬಲ, ತೋಳ್ಬಲ, ಹೆಂಡದ ಬಲಗಳಿಂದ ಜಾತಿ-ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಮೂಲಕ ಚುನಾವಣೆ ಗೆಲ್ಲಬೇಕೆನ್ನುತ್ತಾರೆ. ಇಂಥವರಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಎಂದರು.
ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ 22 ಸೀಟು ಗೆದ್ದೇ ಗೆಲ್ಲುತ್ತೇವೆಯೆಂದು ರಕ್ತದಲ್ಲಿ ಬರೆದುಕೊಡ್ತೀನಿ ಅಂತ ಯಡಿಯೂರಪ್ಪ ಹೇಳಿದ್ರು.