ಕರ್ನಾಟಕ ಲೋಕಸಭೆ ಚುನಾವಣೆ ಫಲಿತಾಂಶ 2019: ಲೈವ್ ಅಪ್‌ಡೇಟ್ಸ್

ಕರ್ನಾಟಕ ರಾಜ್ಯದಲ್ಲಿ ನಡೆದ ಎರಡು ಹಂತದ ಲೋಕಸಭೆ ಚುನಾವಣೆಯಲ್ಲಿ ಪ್ರಮುಖ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಪರಸ್ಪರ ಪ್ರಬಲ ಪೈಪೋಟಿ ನೀಡಿವೆ. 
[$--lok#2019#state#karnataka--$]
 
ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳಿದ್ದು, 27 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸಿದ್ದರೆ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾರನ್ನು ಬೆಂಬಲಿಸಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಎಲ್ಲಾ 28 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. 
 
ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಚುನಾವಣೆ ಕಣಕ್ಕಿಳಿದರೆ, ಬಿಜೆಪಿ ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಚುನಾವಣೆ ಸಮರಕ್ಕೆ ನಾಂದಿ ಹಾಡಿದೆ.
[$--lok#2019#constituency#karnataka--$]
 ಕೇಂದ್ರ ಚುನಾವಣೆ ಆಯೋಗ ದೇಶಾದ್ಯಂತ ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಸುತ್ತಿದ್ದು, ದೇಶದ ಒಟ್ಟು 543 ಕ್ಷೇತ್ರಗಳಲ್ಲಿ ಮತದಾನ ಅಂತ್ಯವಾಗಿದೆ. ಚುನಾವಣೆ ಫಲಿತಾಂಶ ಮೇ 23 ರಂದು ಹೊರಬೀಳಲಿದ್ದು, ಯಾವ ಪಕ್ಷ ಕೇಂದ್ರದ ಗದ್ದುಗೆ ಏರಲಿದೆಯೇ ಕಾದುನೋಡಬೇಕಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ