ಎನ್‌ಡಿಟಿವಿ ಸಮೀಕ್ಷೆ: ಕರ್ನಾಟಕದಲ್ಲಿ ಬಿಜೆಪಿಗೆ ಭರ್ಜರಿ ಜಯ

ಶುಕ್ರವಾರ, 14 ಮಾರ್ಚ್ 2014 (17:57 IST)
PR
ಕಳೆದ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಕಾಂಗ್ರೆಸ್ ಮಣ್ಣುಮುಕ್ಕಿಸಿದ್ದರೆ, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮತದಾರರು ಬಿಜೆಪಿಯತ್ತ ಒಲವು ತೋರಿದ್ದಾರೆ. ಬಿ.ಎಸ್. ಯಡಿಯೂರಪ್ಪ ಮತ್ತು ಶ್ರೀರಾಮುಲು ಅವರನ್ನು ಮತ್ತೆ ಬಿಜೆಪಿಗೆ ತರುವ ಪಕ್ಷದ ನಿರ್ಧಾರ ಅದಕ್ಕೆ ಪ್ಲಸ್ ಪಾಯಿಂಟ್ ಆಗಿ ಕೆಲಸ ಮಾಡಿದೆ. ಸಿದ್ದರಾಮಯ್ಯ ಜನಪ್ರಿಯ ಮುಖ್ಯಮಂತ್ರಿಯಾಗಿದ್ದರೂ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಯಾವುದೇ ಲಾಭವಿಲ್ಲ ಎಂದು ಎನ್‌ಡಿಟಿವಿ ಚುನಾವಣೆ ಪೂರ್ವ ಸಮೀಕ್ಷೆ ತೋರಿಸಿದೆ. ಕರ್ನಾಟಕದಲ್ಲಿ ಒಟ್ಟು 28 ಸೀಟುಗಳಿದ್ದು, ಬಿಜೆಪಿ 20 ಸ್ಥಾನಗಳನ್ನು ಗಳಿಸುತ್ತದೆಂದು ಸಮೀಕ್ಷೆ ತಿಳಿಸಿದೆ.

ಕಾಂಗ್ರೆಸ್ ಕೇವಲ 6 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಿದೆ. ಉಳಿದ ಪಕ್ಷಗಳಿಗೆ ಎರಡು ಸ್ಥಾನಗಳು ಸಿಗಲಿದೆ. ಈ ಬಾರಿ ನರೇಂದ್ರ ಮೋದಿ ಅಲೆ ದೇಶಾದ್ಯಂತ ಬೀಸುತ್ತಿರುವುದು ಈ ಫಲಿತಾಂಶಕ್ಕೆ ಕಾರಣವಿರಬಹುದು ಎಂದು ವಿಶ್ಲೇಷಿಸಲಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಜನಪ್ರಿಯತೆಯೇನೂ ಕುಸಿದಿಲ್ಲ. ಆದರೆ ಕೇಂದ್ರದಲ್ಲಿ ಎನ್‌ಡಿಎ ಸರ್ಕಾರವನ್ನು ತರುವ ಉದ್ದೇಶದಿಂದ ಬಿಜೆಪಿಯತ್ತ ಮತದಾರರು ಒಲವು ತೋರುತ್ತಿರಬಹುದು ಎಂದು ಭಾವಿಸಲಾಗಿದೆ.

ವೆಬ್ದುನಿಯಾವನ್ನು ಓದಿ