ಬೆಂಗಳೂರು : ಮದುವೆ ಅಥವಾ ಇನ್ನಿತರ ಸಮಾರಂಭಗಳು ಎದುರಿಗಿರುವಾಗ ಸಾಮಾನ್ಯವಾಗಿ ಎಲ್ಲರ ಆಯ್ಕೆ ಆಭರಣ ಮತ್ತು ಉಡುಪಿನದ್ದೇ ಆಗಿರುತ್ತದೆ.
ಅದರಲ್ಲೂ ಚಿನ್ನ, ಬೆಳ್ಳಿ ಕೊಳ್ಳುವುದೆಂದರೆ ಎಲ್ಲರಿಗೂ ಆಸಕ್ತಿಯ ವಿಷಯ. ಈಗ ಮಾರುಕಟ್ಟೆಯಲ್ಲಿ ಯಾವ ಯಾವ ಹೊಸ ಹೊಸ ಶೈಲಿಯ ಆಭರಣಗಳು ಇದೆ. ಅದರಲ್ಲಿ ತಮ್ಮ ಬಜೆಟ್ಗೆ ತಕ್ಕವು ಯಾವುದು ಎಂದು ಸದಾ ಯೋಚಿಸುತ್ತಿರುತ್ತಾರೆ.
ಇದಲ್ಲದೇ ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳು. ಹೀಗಾಗಿ ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸುವುದು ಸೂಕ್ತ. ಇಂದು ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,360 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,53,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 100 ರೂಪಾಯಿ ಏರಿಕೆಯಾಗಿದೆ.
ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,490 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,94,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 100 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 62,300 ರೂಪಾಯಿ ನಿಗದಿಯಾಗಿದೆ.