ಅತ್ಯಾಚಾರಿಯನ್ನು ವಿವಾಹವಾಗಲು ನಿರಾಕರಿಸಿದ ವಿದ್ಯಾರ್ಥಿನಿ ಆತ್ಮಹತ್ಯೆ

ಬುಧವಾರ, 2 ಏಪ್ರಿಲ್ 2014 (15:02 IST)
ಅತ್ಯಾಚಾರವೆಸಗಿದ ವ್ಯಕ್ತಿಯನ್ನೇ ಮದುವೆಯಾಗುವಂತೆ ಮನೆಯವರು ಹೇರಿದ ಒತ್ತಡದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ವರದಿಯಾಗಿದೆ.

ಕೊಡೆರ್ಮಾ ಜಿಲ್ಲೆಯಲ್ಲಿ ವಾಸಿಸುತ್ತಿದ್ದ 8ನೇ ಕ್ಲಾಸ್‌ನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ನಿನ್ನೆ ರಾತ್ರಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ವರದಿಗಳ ಪ್ರಕಾರ, ಕಳೆದ ಸೆಪ್ಟೆಂಬರ್ 11 ರಂದು ವಿದ್ಯಾರ್ಥಿನಿ ಶಾಲೆಯಿಂದ ಮರಳುತ್ತಿರುವ ಸಂದರ್ಭದಲ್ಲಿ ಆರೋಪಿ ಆಕೆಯನ್ನು ಒತ್ತಾಯಪೂರ್ವಕವಾಗಿ ಅಪಹರಿಸಿ ಅತ್ಯಾಚಾರವೆಸಗಿದ್ದನು.ಅತ್ಯಾಚಾರಕ್ಕೊಳಗಾದ ವಿದ್ಯಾರ್ಥಿನಿಯ ಕುಟುಂಬ ಪೊಲೀಸ್ ಠಾಣೆಗೆ ದೂರು ನೀಡಿದಾಗ ಆರೋಪಿಯನ್ನು ಬಂಧಿಸಲಾಗಿತ್ತು.

ಅತ್ಯಾಚಾರ ಪ್ರಕರಣ ಕೈ ಬಿಟ್ಟು ಆರೋಪಿಯನ್ನು ಮದುವೆಯಾಗುವಂತೆ ಆರೋಪಿಯ ಕುಟುಂಬದವರು ಒತ್ತಡ ಹೇರಿ ಬೆದರಿಕೆಯೊಡ್ಡಿದ್ದರು. ಇದರಿಂದ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಮೊರೆಹೋಗಿದ್ದಾಳೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ