ಅರವಿಂದ್ ಕೇಜ್ರಿವಾಲ್‌ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ: ಠಾಕ್ರೆ

ಸೋಮವಾರ, 6 ಜನವರಿ 2014 (16:06 IST)
PTI
ಭ್ರಷ್ಟ ಕಾಂಗ್ರೆಸ್ ಪಕ್ಷದ ಬಾಹ್ಯ ಬೆಂಬಲ ಪಡೆದು ಸರಕಾರ ರಚಿಸಿದ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್‌ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಶಿವಸೇನೆ ಮುಖ್ಯಸ್ಥ ಉದ್ಭವ್ ಠಾಕ್ರೆ ಕಿಡಿಕಾರಿದ್ದಾರೆ.

ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸಮತಗಳಿಸಲು ಭ್ರಷ್ಟ ಕಾಂಗ್ರೆಸ್ ಪಕ್ಷದ ಬೆಂಬಲ ಪಡೆದ ಕೇಜ್ರಿವಾಲ್, ಒಂದು ವೇಳೆ ಭ್ರಷ್ಟಾಚಾರ ನಿಯಂತ್ರಿಸುತ್ತೇನೆ ಎಂದು ಹೇಳಿಕೆ ನೀಡಿದರೆ ಅವರನ್ನು ಮಾನಸಿಕ ಅಸ್ವಸ್ಥ ಎಂದು ಪರಿಗಣಿಸಬೇಕಾಗುತ್ತದೆ ಎಂದು ಠಾಕ್ರೆ ಲೇವಡಿ ಮಾಡಿದ್ದಾರೆ.

ಅರವಿಂದ್ ಕೇಜ್ರಿವಾಲ್ ಬಿಜೆಪಿ ಮುಖಂಡ ಹರ್ಷವರ್ಧನ್ ಅವರಿಗೆ ಪ್ರಾಮಾಣಿಕತೆಯ ಪದವಿ ಪತ್ರ ನೀಡಿದ್ದಾರೆ. ವಿಶ್ವಾಸಮತ ಸಂದರ್ಭದಲ್ಲಿ ಹರ್ಷವರ್ಧನ್ ಆಪ್ ಪಕ್ಷ ಜನತೆಯನ್ನು ಹೇಗೆ ವಂಚಿಸುತ್ತಿದೆ ಎನ್ನುವುದನ್ನು ಬಹಿರಂಗಪಡಿಸಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಕೇಜ್ರಿವಾಲ್ ಆಂಡ್ ಕಂಪೆನಿ ಮೆಟ್ರೋ ರೈಲಿನಿಂದ ತೆರಳುವುದು ಸರಕಾರಿ ಬಂಗಲೆ ನಿರಾಕರಿಸಿದ ಬಗ್ಗೆ ಆಪ್ ಮುಖಂಡರು ಹೇಳುತ್ತಾರೆ. ಆದರೆ, ಜನತೆಗೆ ನೀಡಿದ ಭರವಸೆಗಳನ್ನು ಗಾಳಿಗೆ ತೂರಿದ್ದಾರೆ ಎಂದು ಶಿವಸೇನಾ ಮುಖ್ಯಸ್ಥ ಉದ್ಭವ್ ಠಾಕ್ರೆ ಆರೋಪಿಸಿದ್ದಾರೆ.

ವೆಬ್ದುನಿಯಾವನ್ನು ಓದಿ