ಆಂಧ್ರಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಅಸ್ತು

ಶುಕ್ರವಾರ, 28 ಫೆಬ್ರವರಿ 2014 (12:24 IST)
PR
PR
ಕೇಂದ್ರ ಸಚಿವ ಸಂಪುಟ ಸಭೆ ನವದೆಹಲಿಯಲ್ಲಿ ಆರಂಭವಾಗಿದ್ದು, ಆಂಧ್ರಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಸಂಪುಟದಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಇದರಿಂದ 41 ವರ್ಷಗಳ ಬಳಿಕ ಆಂಧ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಮತ್ತೆ ಜಾರಿಗೆ ಬಂದಿದೆ. ಆಂಧ್ರದ ವಿಭಜನೆ ಮಾಡಿ ತೆಲಂಗಾಣ ರಾಜ್ಯ ರಚನೆಯನ್ನು ತೀವ್ರವಾಗಿ ವಿರೋಧಿಸಿ ಕಿರಣ್ ಕುಮಾರ್ ರೆಡ್ಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇದರಿಂದ ಆಂಧ್ರದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಸಾಕಷ್ಟು ಚರ್ಚೆಯ ಬಳಿಕ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಒಪ್ಪಿಗೆ ಸೂಚಿಸಲಾಯಿತು. ಆಂಧ್ರದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳು ಒಟ್ಟಿಗೆ ನಡೆಯಲಿದ್ದು, ಅಲ್ಲಿಯವರೆಗೆ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿರುತ್ತದೆ.

ವೆಬ್ದುನಿಯಾವನ್ನು ಓದಿ