ಆರ್ಥಿಕ ಸುಧಾರಣೆ ನೆಪದಲ್ಲಿ ಯುಪಿಎ ಸರಕಾರ ಲೂಟಿ: ಮಮತಾ

ಗುರುವಾರ, 4 ಅಕ್ಟೋಬರ್ 2012 (15:15 IST)
PTI
ಕೇಂದ್ರ ಸರಕಾರ ಆರ್ಥಿಕ ಸುಧಾರಣೆಗಳ ನೆಪದಲ್ಲಿ ದೇಶವನ್ನು ಲೂಟಿ ಮಾಡುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಎಲ್‌ಪಿಜಿ ಸಿಲಿಂಡರ್ ಮಿತಿಯಿಂದಾಗಿ ಮತ್ತು ಪ್ರತಿ ಸಿಲಿಂಡರ್‌ ಮೇಲಿನ ದರವನ್ನು 127 ರೂಪಾಯಿಗಳಿಗೆ ಹೆಚ್ಚಿಸಿರುವುದು ಜನಸಾಮಾನ್ಯರಿಗೆ ಹೊರೆಯಾಗಿದೆ. ಮುಂಬರುವ ದಿನಗಳಲ್ಲಿ ಸಿಲಿಂಡರ್ ದರದಲ್ಲಿ ಮತ್ತಷ್ಟು ಹೆಚ್ಚಳವಾಗಲಿದೆ ಎಂದು ಕಿಡಿಕಾರಿದ್ದಾರೆ.

ಸಬ್ಸಿಡಿ ರಹಿತ ಸಿಲಿಂಡರ್ ದರವನ್ನು ಹೆಚ್ಚಳಗೊಳಿಸಿದ್ದರಿಂದ ಶಾಲಾ ಮಕ್ಕಳಿಗೆ ನೀಡುತ್ತಿರುವ ಮಧ್ಯಾಹ್ನದ ಬಿಸಿಯೂಟ ಸ್ಥಗಿತಗೊಳಿಸುವ ಸಾಧ್ಯತೆಗಳಿರುವುದರಿಂದ ಮಕ್ಕಳಉ ಹಸಿವಿನಿಂದ ಕಂಗಾಲಾಗುವ ಸಾಧ್ಯತೆಗಳಿರುವುದರಿಂದ ಇದೊಂದು ಸೂಕ್ಷ್ಮ ಸಂಗತಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರಕಾರದ ಅನೈತಿಕ, ಅಸಂವಿಧಾನಿಕ ನೀತಿಗಳ ವಿರುದ್ಧ ಪ್ರತಿಭಟನೆ ನಡೆಸುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ