ಉಪವಾಸ: ಸೇನಾ ಮುಖ್ಯಸ್ಥರನ್ನು ಆಹ್ವಾನಿಸಿದ ಬಾಬಾ ರಾಮದೇವ್

ಶುಕ್ರವಾರ, 6 ಏಪ್ರಿಲ್ 2012 (12:25 IST)
PTI
ನವದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 6 ರಿಂದ ನಡೆಯಲಿರುವ ಸಾಮೂಹಿಕ ಉಪವಾಸ ಪ್ರತಿಭಟನೆಯಲ್ಲಿ ಸೇನಾ ಮುಖ್ಯಸ್ಥ ವಿ.ಕೆ.ಸಿಂಗ್ ಪಾಲ್ಗೊಳ್ಳುವಂತೆ ಆಹ್ವಾನ ನೀಡಿರುವುದಾಗಿ ಯೋಗಾ ಗುರು ಬಾಬಾ ರಾಮದೇವ್ ಹೇಳಿದ್ದಾರೆ.

ಭ್ರಷ್ಟಾಚಾರ, ವಿದೇಶಿ ಬ್ಯಾಂಕ್‌ಗಳಲ್ಲಿರುವ ಭಾರತೀಯರ ಕಪ್ಪುಹಣವನ್ನು ಸ್ವದೇಶಕ್ಕೆ ತರುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲು ಸಾಮೂಹಿಕ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ ಎಂದು ರಾಮದೇವ್ ತಿಳಿಸಿದ್ದಾರೆ.

ಮುಂದಿನ ತಿಂಗಳು ಸೇನಾ ಮುಖ್ಯಸ್ಥ ಜನರಲ್ ವಿ.ಕೆ.ಸಿಂಗ್ ನಿವೃತ್ತಿಯಾಗಲಿರುವುದರಿಂದ, ಸಾಮೂಹಿಕಿ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಬಹುದು. ಸೇನಾ ಮುಖ್ಯಸ್ಥರಾಗುವುದಕ್ಕಿಂತ ಮುಂಚೆ ಆಶ್ರಮಕ್ಕೆ ಭೇಟಿ ನೀಡುವಂತೆ ಮನವಿ ಮಾಡಲಾಗಿತ್ತು. ತುಂಬಾ ಹಿಂದಿನಿಂದಲೂ ಅವರ ಪರಿಚಯವಿರುವುದರಿಂದ ನಮ್ಮ ಆಹ್ವಾನವನ್ನು ಸ್ವೀಕರಿಸುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ವಿವರಣೆ ನೀಡಿದ್ದಾರೆ.

ಭ್ರಷ್ಟಾಚಾರ ವಿರುದ್ಧದ ಹೋರಾಟದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಮುಖಂಡರು ಪಾಲ್ಗೊಳ್ಳಬೇಕು. ರಾಷ್ಟ್ರೀಯ ಜನತಾ ದಳ ಪಕ್ಷದ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಕೂಡಾ ಇಂದು ಬೆಳಿಗ್ಗೆ ಕರೆ ಮಾಡಿ ತಾವು ಹಿಂದೆ ಮಾಡಿದ ಆರೋಪಗಳಿಗೆ ಕ್ಷಮೆಯಾಚಿಸಿದ್ದಾರೆ ಎಂದು ಯೋಗಾ ಗುರು ಬಾಬಾ ರಾಮದೇವ್ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ