ಏಪ್ರಿಲ್ 7, 9, 10, 12, 17, 24, 30, ಮೇ 7 ಮತ್ತು 12: ಒಟ್ಟು 9 ಹಂತಗಳಲ್ಲಿ ಚುನಾವಣೆ

ಬುಧವಾರ, 5 ಮಾರ್ಚ್ 2014 (11:53 IST)
PR
PR
ಏಪ್ರಿಲ್ 7, 9, 10, 12, 17, 24, 30ರಂದು ಹಾಗೂ ಮೇ 7 ಮತ್ತು 12ರಂದು ಒಟ್ಟು 9 ಹಂತಗಳಲ್ಲಿ , ಒಟ್ಟು 543 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕದ 28 ಕ್ಷೇತ್ರಗಳಲ್ಲಿ ಒಂದೇ ಹಂತದ ಮತದಾನ ಏಪ್ರಿಲ್ 17ರಲ್ಲಿ ನಡೆಯಲಿದೆ. ಮಾರ್ಚ್ 26ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಮಾರ್ಚ್ 29ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ಇಂದಿನಿಂದ ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದಿರುವುದರಿಂದ ಯಾವುದೇ ರೀತಿಯ ಘೋಷಣೆಗಳನ್ನು ಮಾಡುವಂತಿಲ್ಲ. ಕರ್ನಾಟಕದಲ್ಲಿ ಕಳೆದ ಬಾರಿ ಎರಡು ಹಂತಗಳಲ್ಲಿ ನಡೆಸಲಾಗಿತ್ತು.

ಈ ಬಾರಿ ಒಂದು ಹಂತದಲ್ಲಿ ನಡೆಸಲಾಗುತ್ತದೆ. ನಕ್ಸಲ್ ಪೀಡಿತ ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಸುವುದು ವಿಶೇಷವಾಗಿದೆ. ಉತ್ತರಪ್ರದೇಶದಲ್ಲಿ ಮತ್ತು ಬಿಹಾರದಲ್ಲಿ 6 ಹಂತಗಳಲ್ಲಿ ಚುನಾವಣೆ ಪ್ರಕ್ರಿಯೆ ನಡೆಯುತ್ತಿದೆ. ಒಟ್ಟು 9 ಲಕ್ಷ 30 ಸಾವಿರ ಮತಗಟ್ಟೆಗಳಲ್ಲಿ 81.4 ಕೋಟಿ ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಲಿದ್ದಾರೆ. ಏಪ್ರಿಲ್ 10ರಂದು 12 ರಾಜ್ಯಗಳಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 12ರಂದು ಮೂರು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. ಮೇ 16ರಂದು ಮತಎಣಿಕೆ ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ.

ವೆಬ್ದುನಿಯಾವನ್ನು ಓದಿ