ಕಾಂಗ್ರೆಸ್ ಪಕ್ಷ ದೇಶವನ್ನು ಧರ್ಮದ ಆಧಾರದ ಮೇಲೆ ವಿಭಜಿಸುತ್ತಿದೆ: ರಾಜನಾಥ್ ಸಿಂಗ್

ಶನಿವಾರ, 18 ಜನವರಿ 2014 (15:56 IST)
PR
ಬಿಜೆಪಿ ಕೋಮುವಾದಿ ಪಕ್ಷ ಎಂದು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಕ್ಕೆ ತಿರುಗೇಟು ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಕಾಂಗ್ರೆಸ್ ಪಕ್ಷ ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಒಂದು ವೇಳೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಪ್ರಧಾನಿಯಾದರೆ ದೇಶಕ್ಕೆ ವಿನಾಶ ಕಾದಿದೆ ಎಂದು ಪ್ರಧಾನಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಧಾನಿ ಸಿಂಗ್ ಅವರ ಅವಧಿಯಲ್ಲಿ ದೇಶ ವಿನಾಶದ ಅಂಚಿಗೆ ತಲುಪಿಸಿದ್ದಾರೆ. ಆದರೆ, ಮೋದಿ ಗುಜರಾತ್ ರಾಜ್ಯವನ್ನು ಮಾದರಿಯನ್ನಾಗಿ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ರಾಜನಾಥ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ