ಗುಜರಾತ್ ದಂಗೆಯ ಸಂದರ್ಭದಲ್ಲಿ ವಾಜಪೇಯಿ ಬೆಂಬಲ ಸೂಚಿಸಿದ್ದರು: ಮೋದಿ

ಶುಕ್ರವಾರ, 22 ನವೆಂಬರ್ 2013 (13:01 IST)
PTI
ಕಳೆದ 2002ರಲ್ಲಿ ಗುಜರಾತ್‌ನಲ್ಲಿ ನಡೆದ ದಂಗೆಯ ಸಂದರ್ಭದಲ್ಲಿ ಗುಜರಾತ್ ಸರಕಾರದ ಉತ್ತಮ ಕಾರ್ಯ ನಿರ್ವಹಣೆ ಬಗ್ಗೆ ಮಾಜಿ ಪ್ರಧಾನಿ ನಾಜಪೇಯಿ ಶ್ಲಾಘಿಸಿದ್ದರು ಎಂದು ಬಿಜೆಪಿ ಪ್ರದಾನಿ ಅಭ್ಯರ್ಥಿ ನರೇಂದ್ರ ಮೋದಿ ಹೇಳಿಕೆ ನೀಡಿರುವುದು ಮತ್ತೊಂದು ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ.

ಮುಖ್ಯಮಂತ್ರಿಯಾಗಿದ್ದವರು ಸದಾ ರಾಜಧರ್ಮವನ್ನು ಪಾಲಿಸಬೇಕು ಎಂದು ಹೇಳುತ್ತಾರೆ. ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ರಾಜಧರ್ಮ ಪಾಲಿಸುತ್ತಿದ್ದಾರೆ ಎಂದು ಕೂಡಾ ಹೇಳಿದ್ದಾರೆ ಎಂದು ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ

2002ರಲ್ಲಿ ನಡೆದ ಗುಜರಾತ್ ದಂಗೆಯ ಸಂದರ್ಭದಲ್ಲಿ ಮಾಜಿ ಪ್ರಧಾನಿ ವಾಜಪೇಯಿ ನರೇಂದ್ರ ಮೋದಿಗೆ ರಾಜಧರ್ಮ ಪಾಲಿಸುವಂತೆ ಆದೇಶ ನೀಡಿದ್ದರು ಎಂದು ಪ್ರಧಾನಿ ಮನಮೋಹನ್ ಸಿಂಗ್ ಹೇಳಿಕೆಗೆ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.

ಮಧ್ಯಪ್ರದೇಶದಲ್ಲಿ ಬಿಜೆಪಿ ಪರ ಅಲೆಯಿದ್ದು, ವಿಧಾನಸಭೆ ಚುನಾವಣೆಯಲ್ಲಿ ಅತ್ಯಧಿಕ ಬಹುಮತಗಳಿಸಿ ಮತ್ತೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಮೋದಿ ಭವಿಷ್ಯ ನುಡಿದರು.

ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅಧಿಕಾರದಲ್ಲಿದ್ದಾಗ ರಾಜ್ಯದ ಅಭಿವದ್ಧಿ ಎಷ್ಟರಮಟ್ಟಿಗೆ ಆಗಿದೆ. ಇವತ್ತು ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ಯಾವ ಮಟ್ಟಿಗೆ ಅಭಿವೃದ್ಧಿಯಾಗಿದೆ ಎನ್ನುವುದನ್ನು ಜನತೆ ಅರಿಯಬೇಕು ಎಂದು ನರೇಂದ್ರ ಮೋದಿ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ