ಟ್ರಂಪ್ ವಿರುದ್ಧ ದೋಷಾರೋಪಣೆ

ಶನಿವಾರ, 1 ಏಪ್ರಿಲ್ 2023 (15:20 IST)
ನೀಲಿಚಿತ್ರ ತಾರೆಗೆ ಹಣ ಪಾವತಿ ಮಾಡಿರುವ ಪ್ರಕರಣದಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಮ್ಯಾನ್‌ಹ್ಯಾಟನ್ ಗ್ರ್ಯಾಂಡ್ ಜ್ಯೂರಿ ದೋಷಾರೋಪಣೆ ಸಲ್ಲಿಸಿದೆ. ವಿಚಾರಣೆ ನಡೆಸುತ್ತಿರುವ ಮ್ಯಾನ್‌ಹ್ಯಾಟನ್ ಜಿಲ್ಲಾ ಅಟಾರ್ನಿ ಆಲ್ವಿನ್ ಬ್ರಾಗ್ ಅವರ ಕಚೇರಿಯು, ಟ್ರಂಪ್ ಅವರ ವಕೀಲರನ್ನು ಸಂಪರ್ಕಿಸಿ, ಟ್ರಂಪ್ ಶರಣಾಗತಿಗೆ ಸಹಕರಿಸುವಂತೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ತಮ್ಮ ಮೇಲಿನ ಆರೋಪ ನಿರಾಕರಿಸಿರುವ ಟ್ರಂಪ್, ಈ ದೋಷಾರೋಪಣೆ ಇತಿಹಾಸದಲ್ಲೇ ಅತ್ಯುನ್ನತ ಮಟ್ಟದ ರಾಜಕೀಯ ಕಿರುಕುಳ ಮತ್ತು ಚುನಾವಣಾ ಹಸ್ತಕ್ಷೇಪ ಎಂದು ಖಂಡಿಸಿದ್ದಾರೆ. 2016ರ ಅಧ್ಯಕ್ಷೀಯ ಚುನಾವಣೆ ಪ್ರಚಾರ ಸಂದರ್ಭದಲ್ಲಿ ತಮ್ಮ ಜತೆಗಿನ ಸಂಬಂಧ ಬಹಿರಂಗಪಡಿಸದಿರಲು ನೀಲಿಚಿತ್ರ ತಾರೆಗೆ ಟ್ರಂಪ್ ಹಣ ಸಂದಾಯ ಮಾಡಿದ್ದ ಪ್ರಕರಣ ಇದಾಗಿದೆ. ಈ ಮೂಲಕ ಅಪರಾಧದ ಆರೋಪ ಹೊತ್ತ ಅಮೆರಿಕದ ಮೊದಲ ಮಾಜಿ ಅಧ್ಯಕ್ಷ ಎಂಬ ಅಪಖ್ಯಾತಿಗೆ ಟ್ರಂಪ್ ಒಳಗಾಗಿದ್ದಾರೆ. ಇದರೊಂದಿಗೆ ಟ್ರಂಪ್‌ಗೆ ಬಂಧನ ಭೀತಿ ಎದುರಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ