ತಮಿಳುನಾಡಿನ 39 ಕ್ಷೇತ್ರಗಳಲ್ಲಿ ಆಮ್ ಆದ್ಮಿ ಸ್ಪರ್ಧೆ: ಪ್ರಶಾಂತ್ ಭೂಷಣ

ಸೋಮವಾರ, 20 ಜನವರಿ 2014 (14:32 IST)
PTI
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿ ಅಧಿಕಾರದ ಗದ್ದುಗೆ ಅಲಂಕರಿಸಿದ ಆಮ್ ಆದ್ಮಿ ಪಕ್ಷ ಇದೀಗ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನ 39 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ ಎಂದು ಪಕ್ಷ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರಶಾಂತ್ ಭೂಷಣ್ ತಿಳಿಸಿದ್ದಾರೆ.

ಮುಂಬರುವ ಫೆಬ್ರವರಿ ವೇಳೆಗೆ ಎಷ್ಟು ಅಭ್ಯರ್ಥಿಗಳನ್ನು ಕಣಕ್ಕಿಳಿಸಬಹುದು ಎನ್ವುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ತಮಿಳುನಾಡಿನ ಚೆನ್ನೈಯಲ್ಲಿ ಎರಡು ದಿನಗಳ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಪ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಸುಮಾರು 1 ಲಕ್ಷ ಜನ ಸದಸ್ಯತ್ವ ಹೊಂದಿದ್ದಾರೆ. ಮಾಸಾಂತಕ್ಕೆ ಸದಸ್ಯರ ಸಂಖ್ಯೆ 5 ಲಕ್ಷಕ್ಕೆ ಏರಿಕೆಯಾಗುವ ನಿರೀಕ್ಷೆಗಳಿವೆ. ಜನಪರ ಹೋರಾಟಗಾರರಿಗೆ ಪಕ್ಷಕ್ಕೆ ಸೇರ್ಪಡೆಯಾಗಲು ಆಹ್ವಾನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ ಎರಡೆರೆಡು ಬಣಕಾರ್ಯನಿರ್ವಹಿಸುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಕ್ರಿಸ್ಟಿನಾ ಸಮಿ ಮಾತ್ರ ಪಕ್ಷದ ಅಧಿಕೃತ ಪ್ರತಿನಿಧಿ, ಇತರ ಬಂಡಾಯ ಬಣವನ್ನು ಉಚ್ಚಾಟಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಮನೆ ಮನೆಗೆ ತೆರಳಿ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಐಎಡಿಎಂಕೆ ಮತ್ತು ಡಿಎಂಕೆ ಪಕ್ಷದ ವಿರುದ್ಧ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಒದಗಿಸುವ ವಿಶ್ವಾಸವಿದೆ ಎಂದು ಆಪ್ ಮುಖಂಡ ಪ್ರಶಾಂತ್ ಭೂಷಣ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ