ದೆದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿದ ನಜೀಬ್ ಜಂಗ್

ಶನಿವಾರ, 15 ಫೆಬ್ರವರಿ 2014 (16:20 IST)
PR
PR
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಶಿಫಾರಸು ಮಾಡಿದ್ದಾರೆ. ದೆಹಲಿ ರಾಜಕೀಯದಲ್ಲಿ ದಿನೇ ದಿನೇ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಕೇಜ್ರಿವಾಲ್ ರಾಜೀನಾಮೆ ನಂತರ ಅತಂತ್ರ ಸ್ಥಿತಿ ನಿರ್ಮಾಣವಾಗಿರುವುದರಿಂದ ರಾಷ್ಟ್ರಪತಿ ಆಳ್ವಿಕೆಗೆ ಜಂಗ್ ಶಿಫಾರಸು ಮಾಡಿದರು.

ಈ ಕುರಿತು ರಾಷ್ಟ್ರಪತಿಗೆ ಅವರು ಪತ್ರ ಬರೆದಿದ್ದಾರೆ. ಕೇಜ್ರಿವಾಲ್ ಅವರು ಜನಲೋಕಪಾಲ್ ಮಸೂದೆ ಮಂಡನೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಬೆಂಬಲ ನೀಡಲಿಲ್ಲವಾದ್ದರಿಂದ ಬೇಸತ್ತ ಅವರು ರಾಜೀನಾಮೆ ಪತ್ರ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ 49 ದಿನಗಳ ಆಮ್ಆದ್ಮಿ ಸರ್ಕಾರ ಪತನಗೊಂಡಿತ್ತು.

ವೆಬ್ದುನಿಯಾವನ್ನು ಓದಿ