ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ವಿರುದ್ದ ಆಮ್ ಆದ್ಮಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ

ಗುರುವಾರ, 20 ಫೆಬ್ರವರಿ 2014 (16:45 IST)
PR
PR
ನವದೆಹಲಿ: ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತಂದ ಕೇಂದ್ರಸರ್ಕಾರದ ಕ್ರಮದ ವಿರುದ್ಧ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದೆ.ಕೇಜ್ರಿವಾಲ್ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ವಿಧಾನಸಭೆ ವಿಸರ್ಜನೆಗೆ ಶಿಫಾರಸು ಮಾಡಿದ್ದರು. ಆದರೆ ಕೇಂದ್ರಸರ್ಕಾರ ಅದಕ್ಕೆ ನಿರಾಕರಿಸಿ ವಿಧಾನಸಭೆಯನ್ನು ಅಮಾನತಿನಲ್ಲಿ ಇರಿಸಿತ್ತು. ಕೇಂದ್ರ ಸರ್ಕಾರದ ಕ್ರಮ ದುರುದ್ದೇಶಪೂರಿತ, ಅಸಂವಿಧಾನಿ ಎಂದು ಎಎಪಿ ತನ್ನ ಅರ್ಜಿಯಲ್ಲಿ ವಿವರಿಸಿದೆ. ದೆಹಲಿಯನ್ನು ಪರೋಕ್ಷವಾಗಿ ಕೇಂದ್ರಾಡಳಿತಕ್ಕೆ ಒಳಪಡಿಸಲು ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿ ಮಾಡಿ ವಿಧಾನಸಭೆ ಚುನಾವಣೆಯನ್ನು ವಿಳಂಬಿಸಿತು ಎಂದು ಆಮ್ ಆದ್ಮಿ ಆರೋಪಿಸಿದೆ.

70 ಸದಸ್ಯಬಲದ ದೆಹಲಿ ವಿಧಾನಸಭೆಯಲ್ಲಿ ಎಎಪಿ 27 ಸದಸ್ಯ ಬಲ, ಬಿಜೆಪಿ ಮತ್ತು ಶಿರೋಮಣಿ ಅಕಾಲಿದೋಳ 32 ಸದಸ್ಯಬಲವನ್ನು ಹೊಂದಿವೆ. ಆದರೆ ಬಿಜೆಪಿ ಸರ್ಕಾರ ರಚನೆ ಪ್ರಕ್ರಿಯೆಯಲ್ಲಿ ಭಾಗವಹಿಸಿದೇ ಹೊಸ ಚುನಾವಣೆಗೆ ಆದ್ಯತೆ ನೀಡಿದೆ.

ವೆಬ್ದುನಿಯಾವನ್ನು ಓದಿ