ಪಟೇಲ್ ಪ್ರಧಾನಿಯಾಗಿದ್ರೆ ಬಿಜೆಪಿ, ಆರೆಸ್ಸೆಸ್ ಅಸ್ತಿತ್ವವೇ ಇರುತ್ತಿರಲಿಲ್ಲ: ದಿಗ್ವಿಜಯ್

ಗುರುವಾರ, 31 ಅಕ್ಟೋಬರ್ 2013 (12:53 IST)
PTI
ಒಂದು ವೇಳೆ ಉಕ್ಕಿನ ಮನುಷ್ಯ ಸರ್ಧಾರ ವಲ್ಲಭ ಭಾಯಿ ಪಟೇಲ್ ದೇಶದ ಮೊದಲ ಪ್ರಧಾನಿಯಾಗಿದ್ದರೆ ಇಂದು ಬಿಜೆಪಿ ಮತ್ತು ಆರೆಸ್ಸೆಸ್ ಅಸ್ತಿತ್ವ ಇರುತ್ತಿರಲಿಲ್ಲ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಬಿಜೆಪಿ ಪ್ರಧಾನಿ ಅಭ್ಯರ್ಥಿ ಮೋದಿಗೆ ತಿರುಗೇಟು ನೀಡಿದ್ದಾರೆ.

ಪಂಡಿತ್ ಜವಾಹರ್‌ಲಾಲ್ ನೆಹರು ಬದಲಿಗೆ ಪಟೇಲ್ ಪ್ರಧಾನಿಯಾಗಿದ್ದರೆ ಇವತ್ತು ಬಿಜೆಪಿ ಮತ್ತು ಆರೆಸ್ಸೆಸ್‌ನಂತಹ ಕೋಮುವಾಗಿ ಸಂಘಟನೆಗಳು ಇರುತ್ತಿರಲಿಲ್ಲ ಎಂದು ಲೇವಡಿ ಮಾಡಿದರು.

ನಿನ್ನೆ ಗುಜರಾತ್‌ನಲ್ಲಿ ನಡೆದ ಸಭೆಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮಧ್ಯ ವಾಕ್ಸಮರ್ ಉಂಟಾಗಿತ್ತು

ಕೋಮುಹಿಂಸಾಚಾರದ ಘಟನೆಗಳಿಂದಾಗಿ ಅಂದು ಗೃಹ ಸಚಿವರಾಗಿದ್ದ ಪಟೇಲ್‌ರು ಆರೆಸ್ಸೆಸ್ ಸಂಘಟನೆಯನ್ನು ನಿಷೇಧಿಸಿದ್ದರು ಎನ್ನುವುದನ್ನು ಮೋದಿ ನೆನಪಿನಲ್ಲಿಡಬೇಕು ಎಂದು ವ್ಯಂಗ್ಯವಾಡಿದ್ದಾರೆ.

ವೆಬ್ದುನಿಯಾವನ್ನು ಓದಿ