ಪ್ರಧಾನಿ ಆಕಾಂಕ್ಷಿ ಅಲ್ಲ, ಲೋಕಸಭೆಗೆ ಸ್ಪರ್ಧಿಸುವೆ: ನಿತಿನ್ ಗಡ್ಕರಿ

ಭಾನುವಾರ, 23 ಅಕ್ಟೋಬರ್ 2011 (10:33 IST)
PR
ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಸರತ್ತು ಆರಂಭಿಸಿರುವ ಬಿಜೆಪಿ, ಈಗಾಗಲೇ ಪ್ರಧಾನಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಮುಸುಕಿನ ಗುದ್ದಾಟ ನಡೆಯುತ್ತಿದೆ. ಏತನ್ಮಧ್ಯೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಘೋಷಿಸಿದ್ದಾರೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಆದರೆ ತಾವು ಪ್ರಧಾನಿ ಹುದ್ದೆಯ ಅಭ್ಯರ್ಥಿ ಅಲ್ಲ ಎಂದು ಅವರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದ್ದಾರೆ. ನಾನು ಜನರಿಂದ ಆಯ್ಕೆಯಾಗ ಬಯಸುತ್ತೇನೆ. ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಗಡ್ಕರಿ ತಿಳಿಸಿದ್ದಾರೆ.

ನಾನೀಗ ಪಕ್ಷದ ರಾಷ್ಟ್ರೀಯ ಅಧ್ಯಕ್ಷನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಇದನ್ನು ಹೊರತುಪಡಿಸಿದರೆ ನನಗೆ ಇನ್ಯಾವ ಆಸೆಯೂ ಇಲ್ಲ. ಪ್ರಧಾನಿಯಾಗಬೇಕೆಂಬ ಕನಸನ್ನೂ ನಾನು ಕಂಡಿಲ್ಲ ಎಂದರು.

ಹಾಲಿ ಮಹಾರಾಷ್ಟ್ರ ವಿಧಾನಪರಿಷತ್ ಸದಸ್ಯರಾಗಿರುವ ಗಡ್ಕರಿ ಈ ಹಿಂದೆ ಒಂದೇ ಒಂದು ಬಾರಿ 1985ರಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಸೋಲುಂಡಿದ್ದರು. ಹೀಗಾಗಿ ಪಕ್ಷದ ಒಳಗೂ, ಹೊರಗೂ ಗಡ್ಕರಿ ಓರ್ವ ಜನನಾಯಕನಲ್ಲ ಎಂಬ ಟೀಕೆ ಕೇಳಿಬರುತ್ತಲೇ ಇತ್ತು. ಇದನ್ನು ನಿವಾರಿಸಲೆಂಬಂತೆ ಅವರೀಗ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರ ಕೈಗೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ