ಬಾಯ್‌ಫ್ರೆಂಡ್‌ನನ್ನು ಮರಕ್ಕೆ ಕಟ್ಟಿ ಅತನ ಎದುರಲ್ಲೇ ಗೆಳತಿಯ ಮೇಲೆ ಗ್ಯಾಂಗ್‌ರೇಪ್ ಎಸಗಿದ ಕಾಮುಕರು

ಶನಿವಾರ, 5 ಏಪ್ರಿಲ್ 2014 (14:54 IST)
ಸೆಹತ್‌‍ಗಂಜ್ ಜಿಲ್ಲೆಯ ಮಹಾದೇವ್ ಪಾಣಿ ನಗರದಲ್ಲಿ ನಾಲ್ಕು ಮಂದಿ ಆರೋಪಿಗಳು 15 ವರ್ಷದ ಬಾಲಕಿಯ ಮೇಲೆ ಗ್ಯಾಂಗ್‌ರೇಪ್ ಎಸಗಿ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಾಯ್‌ಫ್ರೆಂಡ್‌ನನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರಲ್ಲೇ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆ. ನಂತರ ಬಾಲಕಿ ಮರಕ್ಕೆ ಕಟ್ಟಿಹಾಕಲಾಗಿದ್ದ ತನ್ನ ಬಾಯ್‌ಫ್ರೆಂಡ್‌ನನ್ನು ಬಿಡಿಸಿಕೊಂಡು ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾಳೆ.

ಭೋಪಾಲ್ ಮೂಲದವಳಾದ ಬಾಲಕಿ ಸಾಮಾಜಿಕ ಅಂತರ್ಜಾಲ ತಾಣದ ಮೂಲಕ ಪರಿಚಯವಾದ ಸ್ನೇಹಿತನೊಂದಿಗೆ ಪಿಕ್‌ನಿಕ್‌ಗೆ ತೆರಳಿದ್ದಾಗ ಈ ಘಟನೆ ನಡೆದಿದೆ.

ಪೊಲೀಸರು ಅಪರಿಚಿತ ಆರೋಪಿಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದು, ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ.

ವೆಬ್ದುನಿಯಾವನ್ನು ಓದಿ