ಬಾಲಕನಿಗೆ ರಿವಾಲ್ವರ್ ತೋರಿಸಿ ಅತ್ಯಾಚಾರವೆಸಗಿದ ಕಾಮಾಂಧರು

ಸೋಮವಾರ, 31 ಮಾರ್ಚ್ 2014 (15:39 IST)
ನಗರದ ಹಾಪುರ್ ಪ್ರದೇಶದಲ್ಲಿ ಇಬ್ಬರು ಶಸ್ತ್ರಾಸ್ತ್ರಧಾರಿ ಯುವಕರು 12 ವರ್ಷ ಬಾಲಕನೊಬ್ಬನನ್ನು ರಿವಾಲ್ವರ್‌ನಿಂದ ಬೆದರಿಸಿ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನೆರೆಮನೆಯಲ್ಲಿ ವಾಸಿಸುತ್ತಿದ್ದ ಆರೋಪಿಗಳಾದ ಮೋಹಿತ್ ಮತ್ತು ಸೂರಜ್ ಪಕ್ಕದ ಮನೆಯಲ್ಲಿದ್ದ ಬಾಲಕನನ್ನು ಲೈಂಗಿಕ ದಾಹಕ್ಕಾಗಿ ಬಳಸಿಕೊಂಡು, ನಂತ್ರ ಬಾಲಕನಿಗೆ ರಿವಾಲ್ವರ್ ತೋರಿಸಿ ಯಾರಿಗಾದರೂ ಮಾಹಿತಿ ನೀಡಿದಲ್ಲಿ ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಆದಾಗ್ಯೂ, ಬಾಲಕ ತನ್ನ ತಂದೆ ತಾಯಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದಾಗ ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

ಆರೋಪಿಗಳು ಮತ್ತು ಇತರ ನೆರೆಹೊರೆಯವರು ಘಟನೆಯ ಬಗ್ಗೆ ಮೌನವಾಗಿರುವಂತೆ ಒತ್ತಾಯಿಸಿದ್ದಾರೆ ಎಂದು ಬಾಲಕನ ತಂದೆ ತಾಯಿ ಆರೋಪಿಸಿದ್ದಾರೆ.

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ರಾಘವ್ ಮಾತನಾಡಿ, ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು ಬಾಲಕನನ್ನು ವೈದ್ಯಕೀಯ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ