ಬಿಜೆಪಿಯಿಂದ ದೇಶದ ಅಭಿವೃದ್ಧಿ ಅಸಾಧ್ಯ: ಪ್ರಧಾನಿ

ಭಾನುವಾರ, 30 ಮಾರ್ಚ್ 2014 (11:38 IST)
PTI
ಬಿಜೆಪಿ ಒಡೆದು ಆಳುವ ನೀತಿ ಅನುಸರಿಸುತ್ತಿದೆ. ಈ ಪಕ್ಷದಿಂದ ಅಭಿವೃದ್ಧಿ ಅಸಾಧ್ಯ ಎಂದು ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಟೀಕಿಸಿದ್ದಾರೆ.

ಅವರು ಅಸ್ಸಾಂನ ಜೋರ್ಹತ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಕೇಂದ್ರ ಮಾಜಿ ಸಚಿವ ಬಿಜಾಯ್ ಕೃಷ್ಣ ಹಾಂಡಿಕ್ ಅವರ ಪರ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಪ್ರತ್ಯೇಕತಾ ಆಡಳಿತದಲ್ಲೇ ತೃಪ್ತಿ ಕಾಣುತ್ತಿದ್ದು, ಈ ಪಕ್ಷಕ್ಕೆ ದೇಶವನ್ನು ಅಭಿವೃದ್ಧಿಪಡಿಸುವ ಯಾವುದೇ ನಿರ್ದಿಷ್ಟ ಯೋಜನೆ ಇಲ್ಲ ಎಂದು ಕಿಡಿಕಾರಿದರು.

ವೆಬ್ದುನಿಯಾವನ್ನು ಓದಿ