ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಬಿಜೆಪಿ, ಕಳಂಕಿತ ಯಡ್ಡಿಯನ್ನು ಯಾಕೆ ಓಲೈಸುತ್ತಿದೆ: ಕಾಂಗ್ರೆಸ್

ಶನಿವಾರ, 21 ಡಿಸೆಂಬರ್ 2013 (16:42 IST)
PR
ಮೇವುಹಗರಣದಲ್ಲಿ ಆರೋಪಿಯಾದ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್‌ರೊಂದಿಗೆ ಕಾಂಗ್ರೆಸ್ ಮೈತ್ರಿಯನ್ನು ಬಿಜೆಪಿ ಟೀಕಿಸಿದೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಬಿಜೆಪಿ ಮಾಜಿ ಮುಖ್ಯಮಂತ್ರಿ ಭ್ರಷ್ಟಾಚಾರದ ಆರೋಪ ಹೊತ್ತಿರುವ ಬಿ.ಎಸ್.ಯಡಿಯೂರಪ್ಪರನ್ನು ಯಾಕೆ ಓಲೈಸುತ್ತಿದೆ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.

ಭ್ರಷ್ಟಾಚಾರದ ಆರೋಪಗಳ ಮೇಲೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಯಡಿಯೂರಪ್ಪರನ್ನು ಮತ್ತೆ ಬಿಜೆಪಿ ಪಕ್ಷಕ್ಕೆ ಕರೆತರಲು ಯಾಕೆ ಪ್ರಯತ್ನಿಸಲಾಗುತ್ತಿದೆ. ಒಂದು ಕಡೆ ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತದೆ. ಮತ್ತೊಂದೆಡೆ ಭ್ರಷ್ಟಾಚಾರದಲ್ಲಿ ಮುಳುಗಿರುವವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸುತ್ತಿದೆ ಇದು ಯಾವ ರಾಜಕೀಯ ಎಂದು ಲೇವಡಿ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷ ದೆಹಲಿಯಲ್ಲಿ ಒಂದೆಡೆ ಕೇಜ್ರಿವಾಲ್ ಅವರನ್ನು ಬೆಂಬಲಿಸುತ್ತಿದೆ. ಮತ್ತೊಂದೆಡೆ ಪಾಟ್ನಾದಲ್ಲಿ ಲಾಲು ಪ್ರಸಾದ್ ಯಾದವ್ ಅವರನ್ನು ಬೆಂಬಲಿಸುತ್ತಿದೆ ಎಂದು ರಾಜ್ಯಸಭೆಯ ವಿಪಕ್ಷ ನಾಯಕ ಅರುಣ್ ಜೇಟ್ಲಿ ಟೀಕಿಸಿದ್ದಾರೆ.

ಮೇವು ಹಗರಣದಲ್ಲಿ ಅಪರಾಧಿಯಾಗಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಲಾಲು ಯಾದವ್, ಪ್ರಸಕ್ತ ವಾರದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಹೊರಬಂದಿದ್ದಾರೆ.

ನೇಮಕಾತಿ ಹಗರಣದಲ್ಲಿ ಸಿಲುಕಿ ಜೈಲು ಶಿಕ್ಷೆ ಅನುಭವಿಸಿದ್ದ ಎನ್‌‌ಡಿಎ ಮೈತ್ರಿಕೂಟದ ಹರಿಯಾಣಾ ಐಎನ್‌ಎಲ್‌ಡಿ ಪಕ್ಷದ ಮುಖ್ಯಸ್ಥ ಒಂ ಪ್ರಕಾಶ್ ಚೌತಾಲಾರನ್ನು ಬಿಜೆಪಿ ಬೆಂಬಲಿಸುತ್ತಿದೆ. ಇಂತಹ ದಂದ್ವ ನೀತಿ ತೊರೆಯಬೇಕು ಎಂದು ತಿರುಗೇಟು ನೀಡಿದ್ದಾರೆ.

ಬಿಹಾರ್ ರಾಜ್ಯದಲ್ಲಿ ಕಾಂಗ್ರೆಸ್, ಆರ್‌ಜೆಡಿ ಮತ್ತು ರಾಮ್ ವಿಲಾಸ್ ಪಾಸ್ವಾನ್ ಪಕ್ಷಗಳ ಮೈತ್ರಿಕೂಟ ಚುನಾವಣೆ ಎದುರಿಸಲು ತಂತ್ರ ರೂಪಿಸಿವೆ.

ವೆಬ್ದುನಿಯಾವನ್ನು ಓದಿ