ಮೇವು ಹಗರಣ: ಲಾಲು ಪ್ರಸಾದ್ ಯಾದವ್‌ಗೆ ಸುಪ್ರೀಂ ಜಾಮೀನು

ಶುಕ್ರವಾರ, 13 ಡಿಸೆಂಬರ್ 2013 (13:15 IST)
PTI
ಮೇವು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್‌ಗೆ ಸುಪ್ರೀಂಕೋರ್ಟ್ ಇಂದು ಜಾಮೀನು ನೀಡಿದೆ.

ಸುಪ್ರೀಂಕೋರ್ಟ್‌ನ ಇಬ್ಬರು ನ್ಯಾಯಾಧೀಶರ ನೇತೃತ್ವದ ನ್ಯಾಯಪೀಠ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಮೇವು ಹಗರಣದಲ್ಲಿ ಭಾಗಿಯಾಗಿರುವ 37 ಆರೋಪಿಗಳಿಗೆ ಈಗಾಗಲೇ ಜಾಮೀನು ನೀಡಲಾಗಿದ್ದರಿಂದ ಲಾಲು ಯಾದವ್ ಅವರಿಗೂ ಜಾಮೀನು ನೀಡಲಾಗಿದೆ ಎಂದು ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ.

ಆದಾಗ್ಯೂ, ಲಾಲು ಪ್ರಸಾದ್ ಯಾದವ್ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವ ಅನರ್ಹತೆಯನ್ನು ಕಳೆದುಕೊಂಡಿದ್ದಾರೆ. ಆರ್‌ಜೆಡಿ ಮತ್ತು ಕಾಂಗ್ರೆಸ್ ಪಕ್ಷಗಳು ನ್ಯಾಯಾಲಯದ ಆದೇಶವನ್ನು ಸ್ವಾಗತಿಸಿವೆ.

ಲಾಲು ಪ್ರಸಾದ್ ಯಾದವ್ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿರುವುದು ಸ್ವಾಗತಾರ್ಹ ಎಂದು ಕೇಂದ್ರ ಸಚಿವ ಕಪಿಲ್ ಸಿಬಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಲಾಲು ಪ್ರಸಾದ್ ಯಾದವ್ ಪತ್ನಿ ಬಿಹಾರ್ ಮಾಜಿ ಮುಖ್ಯಮಂತ್ರಿ ರಾಬ್ಡಿದೇವಿ ಮಾತನಾಡಿ, ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆಯಿದೆ. ನ್ಯಾಯಾಲಯದ ತೀರ್ಪಿನಿಂದ ನೆಮ್ಮದಿ ದೊರೆತಂತಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ