ಮೋದಿ-ಆಡ್ವಾಣಿ ಭಿನ್ನಮತದಿಂದ ಚುನಾವಣೆಯಲ್ಲಿ ಪಕ್ಷಕ್ಕೆ ಲಾಭ: ಮಾಯಾವತಿ

ಶನಿವಾರ, 9 ನವೆಂಬರ್ 2013 (16:23 IST)
PTI
ಬಿಜೆಪಿ ಫ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಹಿರಿಯ ಮುಖಂಡ ಎಲ್.ಕೆ.ಆಡ್ವಾಣಿ ನಡುವಣ ಭಿನ್ನಮತ ಮುಂಬರುವ ಚುನಾವಣೆಯಲ್ಲಿ ಪಕ್ಷಕ್ಕೆ ಲಾಭ ತರಲಿದೆ ಎಂದು ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಹೇಳಿದ್ದಾರೆ.

ಯಾವುದೇ ಪಕ್ಷದೊಂದಿಗೆ ಚುನಾವಣಾ ಪೂರ್ವ ಹೊಂದಾಣಿಕೆಯನ್ನು ತಳ್ಳಿಹಾಕಿದ ಅವರು, ಇತರ ಪಕ್ಷಗಳೊಂದಿಗೆ ಮೈತ್ರಿಯಿಲ್ಲ. ಏಕಾಂಗಿ ಹೋರಾಟ ನಡೆಸಲು ಸಿದ್ದವಾಗಿದೆ ಎಂದು ತಿಳಿಸಿದ್ದಾರೆ.

ಬಿಎಸ್‌ಪಿ ಪಕ್ಷ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲಿದೆ ಎನ್ನುವ ವರದಿಗಳು ಆಧಾರರಹಿತ. ಬಿಎಸ್‌ಪಿ ಪಕ್ಷದ ಬೆಂಬಲಿಗರಿಗೆ ದಾರಿ ತಪ್ಪಿಸಲು ವಿಪಕ್ಷಗಳು ಸಂಚು ರೂಪಿಸಿವೆ ಎಂದು ತಿರುಗೇಟು ನೀಡಿದರು.

ದೇಶದ ಐದು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲಿದೆ. ಮುಂಬರುವ 2014ರ ಲೋಕಸಭೆ ಚುನಾವಣೆಯಲ್ಲಿ ಕಿಂಗ್‌ಮೇಕರ್ ಪಾತ್ರ ವಹಿಸಲಿದೆ ಎಂದು ಭವಿಷ್ಯ ನುಡಿದರು.

ರಾಜ್ಯದಲ್ಲಿ ಸಮಾಜವಾದಿ ಪಕ್ಷದ ದುರಾಡಳಿತದಿಂದ ಜನತೆ ಬೇಸತ್ತು ಹೋಗಿದ್ದಾರೆ. ಜನತೆ ಬದಲಾವಣೆ ಬಯಸುತ್ತಿರುವುದರಿಂದ ಬಿಎಸ್‌ಪಿ ಪಕ್ಷ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದರು.

ಚತ್ತೀಸ್‌ಗಢ್, ಮಧ್ಯಪ್ರದೇಶ, ರಾಜಸ್ಥಾನ ಮತ್ತು ದೆಹಲಿ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಸರಕಾರ ರಚನೆಗಳಲ್ಲಿ ಪ್ರಮುಖ ಪಾತ್ರವಹಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಮಾಯಾವತಿ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ